ಯಾವುದೇ ಕಾರಣಕ್ಕೂ ಗ್ಯಾರಂಟಿ ನಿಲ್ಲುವುದಿಲ್ಲ: ಬಿಜೆಪಿ ಸುಳ್ಳಿನ ಕಾರ್ಖಾನೆ ಎಂದ ಸಿಎಂ ಸಿದ್ದರಾಮಯ್ಯ
ಬಿಜೆಪಿ ಸೋಲುವ ಭೀತಿಯಿಂದ ಸುಳ್ಳು ಹೇಳಿಕೆಗಳನ್ನು ನೀಡುತ್ತಿದೆ. ನೀವು ಅದಕ್ಕೆ ತಲೆ ಕೆಡಿಸಿಕೊಳ್ಳಬೇಡಿ. ಬಿಜೆಪಿ ಸುಳ್ಳಿನ ಕಾರ್ಖಾನೆ. ನಾವು ಕೊಟ್ಟ ಮಾತಿನಂತೆ ನಡೆದುಕೊಂಡು ನೀವು ನೀಡಿದ ಮತಕ್ಕೆ ಘನತೆ ತಂದಿದ್ದೇವೆ. ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿ, ನೀವು ಕೊಟ್ಟ ಮತಕ್ಕೆ ಮೌಲ್ಯ ತಂದು ಕೊಡುವ ರೀತಿಯಲ್ಲಿ ಸರ್ಕಾರ ಕೆಲಸ ಮಾಡುತ್ತದೆ ಎಂದು ಭರವಸೆ ನೀಡಿದರು.