ಧಾರವಾಡ, ಬೆಂಗಳೂರು, ಮೈಸೂರು ಮೂರು ಭಾಗದ ಶಿಕ್ಷಣ ಸಂಸ್ಥೆಗಳಲ್ಲಿ ಕೋವಿಡ್ ಟೆಸ್ಟ್ ಕಡ್ಡಾಯಗೊಳಿಸಲಾಗಿದೆ. ಕೇರಳ, ಮಹಾರಾಷ್ಟ್ರದಿಂದ ಬಂದ ವಿದ್ಯಾರ್ಥಿಗಳಿಗೆ 72 ಗಂಟೆಗಳೊಳಗಿನ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ. ಕೇರಳದಿಂದ ಬಂದ ವಿದ್ಯಾರ್ಥಿಗಳಿಗೆ ಎರಡು ಕೋವಿಡ್ ಟೆಸ್ಟ್. 7 ದಿನಗಳ ನಂತರ ಮತ್ತೊಮ್ಮೆ RTPCR ಟೆಸ್ಟ್. ಕೇರಳ ಗಡಿ ಭಾಗದವರಿಗೆ ಸ್ಕ್ರೀನಿಂಗ್ ಕಡ್ಡಾಯ ಗೊಳಿಸಲಾಗಿದೆ. ಶಿಕ್ಷಣ ಸಂಸ್ಥೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ 2 ತಿಂಗಳು ಬ್ರೇಕ್ ಹಾಕಲಾಗಿದ್ದು, ಕಾರ್ಯಾಗಾರ, ಸೆಮಿನಾರ್ ಮುಂದೂಡಲು ಸೂಚನೆ ನೀಡಿದೆ. ವಿದ್ಯಾರ್ಥಿಗಳು ಲಸಿಕೆ ಪಡೆದಿರುವ ಬಗ್ಗೆ ಖಚಿತಪಡಿಸಿಕೊಳ್ಳಲು ಸೂಚನೆ ಹೊರಡಿಸಲಾಗಿದೆ.