ರಾಜ್ಯದ ಶಾಲೆಗಳಲ್ಲಿನ ಮಧ್ಯಾಹ್ನದ ಬಿಸಿಯೂಟ ತಯಾರಿಕೆಯ ಅಡುಗೆ ಸಿಬ್ಬಂದಿಗಳಿಗೆ ಏಪ್ರಾನ್, ತಲೆಗವಸು, ಕೈಗವರು ಧರಿಸಲು ಶಿಕ್ಷಣ ಇಲಾಖೆ ಸೂಚಿಸಿದೆ.
ಶಿಕ್ಷಣ ಇಲಾಖೆಯಿಂದ ಮಧ್ಯಾಹ್ನದ ಬಿಸಿಯೂಟದಲ್ಲಿ ನೈರ್ಮಲ್ಯ, ಸ್ವಚ್ಛತೆ, ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಕಾಪಾಡುವ ನಿಟ್ಟಿನಲ್ಲಿ ಬಿಸಿಯೂಟ ಸಿಬ್ಬಂದಿಯು ಪಾಲಿಸಬೇಕಾದ ನಿಯಮಗಳ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ.ಬಿಸಿಯೂಟ ಅಡುಗೆ ಸಿಬ್ಬಂದಿಗಳಿಗೆ ಪ್ರಕಟಿಸಿರುವಂತ ಮಾರ್ಗಸೂಚಿಯಲ್ಲಿ ಅಡುಗೆ ಸಿಬ್ಬಂದಿ ಏಪ್ರಾನ್,ತಲೆಗವಸು ಮತ್ತು ಕೈಗವಸುಗಳನ್ನು ಧರಿಸಬೇಕು.ಇದಲ್ಲದೇ ಅಡುಗೆ ಕೋಣೆ ಸ್ವಚ್ಛ ಹಾಗೂ ಧೂಳು ರಹಿತವಾಗಿ ಇರುವಂತೆ ನೋಡಿಕೊಳ್ಳಬೇಕು.ಶುದ್ಧ ನೀರಿನಲ್ಲಿ ಪಾತ್ರೆ ಪರಿಕರಗಳನ್ನು ತೊಳೆಯಬೇಕು.ಗೋಡೆ, ಕಿಟಕಿಗಳಲ್ಲಿ ಹಲ್ಲಿ, ಜೇಡ, ಜಿರಲೆ, ನೋಣಗಳಿಂದ ಮುಕ್ತವಾಗಿರಬೇಕು
ಆಹಾರ ಧಾನ್ಯಗಳಲ್ಲಿ ಕ್ರಿಮಿ, ಕೀಟಗಳು ಇಲ್ಲದಿರುವುದನ್ನು ನೋಡಿಕೊಂಡು ಅಡುಗೆಗೆ ಬಳಕೆ ಮಾಡುವಂತೆ ತಿಳಿಸಲಾಗಿದೆ.ಇನ್ನೂ ಸಿದ್ಧಪಡಿಸಿದ ಆಹಾರದ ಪಾತ್ರೆಗಳನ್ನು ಸುರಕ್ಷಿತವಾಗಿ ಮುಚ್ಚಿಡಬೇಕು.ಹಸಿ ಸೊಪ್ಪು ತರಕಾರಿಗಳನ್ನು ಶುದ್ಧ ನೀರಿನಿಂದ ಚೆನ್ನಾಗಿ ತೊಳೆದು ಸಾಂಬಾರ್ ಮಾಡಬೇಕು.ಸಿದ್ಧಪಡಿಸಿದ ಆಹಾರ ವಿತರಿಸೋ ಮುನ್ನ ಶುಚಿ-ರುಚಿ ಪರೀಕ್ಷಿಸಿ ಭಿಪ್ರಾಯ ದಾಖಲಿಸುವಂತೆಯೂ ಶಿಕ್ಷಣ ಇಲಾಖೆ ಮಾರ್ಗಸೂಚಿಯಲ್ಲಿ ತಿಳಿಸಿದೆ.