ಗುಲಬರ್ಗಾ ವಿಶ್ವವಿದ್ಯಾಲಯದ ಡಾ. ಬಿ.ಆರ್. ಅಂಬೇಡ್ಕರ್ ಸಭಾಂಗಣದಲ್ಲಿ ಡಿಸೆಂಬರ್ 9ರಂದು ಜರುಗುವ ಗುಲಬರ್ಗಾ ವಿಶ್ವವಿದ್ಯಾಲಯದ 35ನೇ ವಾರ್ಷಿಕ ಘಟಿಕೋತ್ಸವದಲ್ಲಿ ಒಟ್ಟು 157 ಚಿನ್ನದ ಪದಕಗಳ ಪೈಕಿ 151 ಚಿನ್ನದ ಪದಕಗಳನ್ನು 84 ವಿದ್ಯಾರ್ಥಿಗಳಿಗೆ, 6 ಚಿನ್ನದ ಪದಕಗಳನ್ನು ನಗದು ಬಹುಮಾನ ರೂಪದಲ್ಲಿ ಪರಿವರ್ತಿಸಿ 8 ವಿದ್ಯಾರ್ಥಿಗಳಿಗೆ ವಿತರಿಸಲಾಗುವುದು ಎಂದು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎಸ್. ಆರ್. ನಿರಂಜನ್ ಹೇಳಿದರು.
ಭಾರತೀಯ ವಿಜ್ಞಾನ ಸಂಸ್ಥೆಯ ಸಂದರ್ಶಕ ಪ್ರಾಧ್ಯಾಪಕ ಹೆಚ್.ಎ. ರಂಗನಾಥ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದು, ವಿಶ್ವವಿದ್ಯಾಲಯದ ಸಮಕುಲಾಧಿಪತಿ ಹಾಗೂ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಅಧ್ಯಕ್ಷತೆ ವಹಿಸಲಿದ್ದಾರೆ. ಕುಲಸಚಿವ ಪ್ರೊ.ದಯಾನಂದ ಅಗಸರ, ಮೌಲ್ಯಮಾಪನ ಕುಲಸಚಿವ ಡಾ. ಸಿ.ಎಸ್. ಪಾಟೀಲ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.