ಕಾಂಗ್ರೆಸ್ ನಲ್ಲಿರುವವರು ಗುಂಡಗಳು

ಮಂಗಳವಾರ, 4 ಜನವರಿ 2022 (17:27 IST)
ಕಾಂಗ್ರೆಸ್ ಗೂಂಡಾಗಳನ್ನು ತಯಾರು ಮಾಡುವ ಫ್ಯಾಕ್ಟರಿ ಎಂದು ರಾಜ್ಯ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಸಿಎಂ ಇದ್ದ ವೇದಿಕೆಯಲ್ಲಿ ಸಚಿವರ ಮೇಲೆ ನಡೆದ ಹಲ್ಲೆ ಯತ್ನಕ್ಕೆ ಸಂಬಂಧಿಸಿದಂತೆ ಸರಣಿ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದೆ.
ಕೆಂಪೇಗೌ ಡರು ಆಳಿದ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕರು ತೋರಿದ ಗೂಂಡಾ ವರ್ತನೆ ಖಂಡನೀಯ. ರಾಜ್ಯದ ಮರ್ಯಾದೆ ಯನ್ನು ಮಣ್ಣುಪಾಲು ಮಾಡುವ ನಾಯಕರನ್ನು ಕಾಂಗ್ರೆಸ್ ಬೆಳೆಸುತ್ತಿದೆ.
 
ಇಂತಹ ಅನೈತಿಕ ರಾಜಕಾರಣದ ಮೂಲಕ ಕಾಂಗ್ರೆಸ್ ರಾಜ್ಯದ ಜನತೆಗೆ ಯಾವ ಸಂದೇಶ ನೀಡುತ್ತಿದ್ದಾರೆ ಎಂದು ಪ್ರಶ್ನೆ ಮಾಡಿದೆ. ಸರ್ಕಾರಿ ಕಾರ್ಯಕ್ರಮದಲ್ಲಿ ಗೂಂಡಾಗಿರಿ ಪ್ರದರ್ಶಿಸಿದ ಕಾಂಗ್ರೆಸ್ ಪಕ್ಷದ ನಾಯಕರನ್ನು ರಾಜ್ಯದ ಜನತೆ ಎಂದಿಗೂ ಕ್ಷಮಿಸುವುದಿಲ್ಲ. ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಕೇವಲ ಶಿಷ್ಟಾಚಾರ ಉಲ್ಲಂಘಿಸಿದ್ದಲ್ಲ, ಸಂವಿಧಾನ ಶಿಲ್ಪಿ ಅಂಬೇಡ್ಕರ್ ಹಾಗೂ ನಾಡಪ್ರಭು ಕೆಂಪೇಗೌಡರಿಗೆ ಅವಮಾನ ಮಾಡಿದ್ದಾರೆ ಎಂದು ವಾಗ್ದಾಳಿ ರಾಜ್ಯ ಬಿಜೆಪಿ ವಾಗ್ದಾಳಿ ನಡೆಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ