ಗುರುರಾಘವೇಂದ್ರ, ವಶಿಷ್ಠ ಸೌಹಾರ್ದ ಬ್ಯಾಂಕ್ ಹಗರಣ ಸಿಬಿಐಗೆ : ಸಚಿವ ಸೋಮಶೇಖರ್
ವಿಕಾಸಸೌಧದಲ್ಲಿ ನಡೆದ ಶ್ರೀ ಗುರುರಾಘವೇಂದ್ರ ಸಹಕಾರ ಬ್ಯಾಂಕ್ನ ಅವ್ಯವಹಾರಗಳು ಮತ್ತು ಪುನಃಶ್ಚೇತನ ಹಾಗೂ ವಶಿಷ್ಠ ಸೌಹಾರ್ದ ಸಹಕಾರಿ ಬ್ಯಾಂಕ್ನ ಅವ್ಯವಹಾರಗಳ ಕುರಿತ ಪರಾಮರ್ಶೆ ಸಭೆಯಲ್ಲಿ ಮಾತನಾಡಿದ ಸಚಿವರು ಸರ್ಕಾರದ ನಿಲುವು ಘೋಷಣೆ ಮಾಡಿದರು.
ಗುರುರಾಘವೇಂದ್ರ, ವಶಿಷ್ಠ ಸೌಹಾರ್ದ ಸೇರಿದಂತೆ ಇತರೆ ಯಾವುದೇ ಬ್ಯಾಂಕ್ಗಳಲ್ಲಿ ನಡೆದಿರುವ ಅವ್ಯವಹಾರಗಳಿದ್ದರೆ ಆ ಪ್ರಕರಣಗಳನ್ನು ಸಹ ಸಿಬಿಐಗೆ ವಹಿಸಲು ಶಿಫಾರಸು ಮಾಡಲಾಗುತ್ತದೆ. ಈ ಕುರಿತು ನಿರ್ಣಯ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.