ತಂದೆ ತಾಯಿ ಆಶೀರ್ವಾದ ಪಡೆದು ನಾಮಪತ್ರ ಸಲ್ಲಿಸಿದ ಎಚ್‌.ಡಿ. ಕುಮಾರಸ್ವಾಮಿ

Sampriya

ಗುರುವಾರ, 4 ಏಪ್ರಿಲ್ 2024 (12:54 IST)
Photo Courtesy X
ಮಂಡ್ಯ: ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಎಚ್‌.ಡಿ.ಕುಮಾರಸ್ವಾಮಿ ಇಂದು  ನಾಮಪತ್ರ ಸಲ್ಲಿಕೆ ಮಾಡಿದರು.

ನಾಮಪತ್ರ ಸಲ್ಲಿಕೆಗೂ ಮುನ್ನಾಅಂಬೇಡ್ಕರ್‌ ಪುತ್ತಳಿಗೆ ಹಾರ ಹಾಕಿದರು. ಅದಲ್ಲದೆ ನಗರದ ಶ್ರೀ ಲಕ್ಷ್ಮಿ ಜನಾರ್ದನ ದೇವರ ಸನ್ನಿಧಿಗೆ ತೆರಳಿ ಪೂಜೆ ಸಲ್ಲಿಸಿದರು.  ತಂದೆ ದೇವೇಗೌಡ ಹಾಗೂ ತಾಯಿಯ ಆಶೀರ್ವಾದ ಪಡೆದ ನಂತರ ನಾಮಪತ್ರ ಸಲ್ಲಿಕೆ ಮಾಡಿದರು.

ಈ ಬಗ್ಗೆ ಎಚ್‌.ಡಿ.ಕುಮಾರಸ್ವಾಮಿ ಅವರು ಬರೆದುಕೊಂಡಿದ್ದಾರೆ. ಮೈತ್ರಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವ ಮುನ್ನ ಪೂಜ್ಯ ತಂದೆ ತಾಯಿ ಅವರ ಆಶೀರ್ವಾದ ಪಡೆದುಕೊಂಡೆ. ಇದೇ ವೇಳೆ ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಂದ ಬೀ ಫಾರಂ ಸ್ವೀಕರಿಸಿದರು

ನಾಮಪತ್ರ ಸಲ್ಲಿಕೆ ನಂತರ ಮಂಡ್ಯದ ಸರ್ಕಾರಿ ಬಾಲಕರ ಕಾಲೇಜು ಆವರಣದಲ್ಲಿ ಹಮ್ಮಿಕೊಂಡಿದ್ದ ಬೇಹತ್ ಸಮಾವೇಶದಲ್ಲಿ ಪಾಲ್ಗೊಂಡರು.

ಈ ಬಗ್ಗೆ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿರುವ ಎಚ್‌ಡಿ ಕುಮಾರಸ್ವಾಮಿ ಅವರು,  ಮಂಡ್ಯ ಲೋಕಸಭೆ ಕ್ಷೇತ್ರದ @JanataDal_S
 , @BJP4Karnataka
 ಮೈತ್ರಿ ಅಭ್ಯರ್ಥಿಯಾದ ನಾನು ಇಂದು ಬೆಳಗ್ಗೆ 10.30 ಗಂಟೆಗೆ ನಾಮಪತ್ರ ಸಲ್ಲಿಕೆ ಮಾಡಲಿದ್ದೇನೆ. ಸಕ್ಕರೆನಾಡಿನ ಜನರ ಅಕ್ಕರೆ ನನ್ನ ಮೇಲೆ ಇರಲಿ. ಶ್ರೀ @narendramodi
 ಅವರು ಮತ್ತೊಮ್ಮೆ ಪ್ರಧಾನಿಗಳಾಗುವ ನಿಟ್ಟಿನಲ್ಲಿ ನನ್ನನ್ನು ಹರಸಿ, ಗೆಲ್ಲಿಸಬೇಕು ಎಂದು ವಿನಂತಿ ಮಾಡಿಕೊಳ್ಳುತ್ತೇನೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ