ಸಿಎಂ, ಆರೆಸ್ಸೆಸ್, ಬಿಜೆಪಿ ನಡುವೆ ಒಳಒಪ್ಪಂದ: ಎಚ್ ವಿಶ್ವನಾಥ್ ಆರೋಪ

ಶನಿವಾರ, 28 ಅಕ್ಟೋಬರ್ 2017 (13:02 IST)
ಮುಖ್ಯಮಂತ್ರಿ ಸಿದ್ದರಾಮಯ್ಯ, ಸಂಘಪರಿವಾರ ಮತ್ತು ಬಿಜೆಪಿ ನಡುವೆ ಒಳಒಪ್ಪಂದವಿದೆ ಎಂದು ಜೆಡಿಎಸ್ ಹಿರಿಯ ಮುಖಂಡ, ಮಾಜಿ ಸಂಸದ ಎಚ್.ವಿಶ್ವನಾಥ್ ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದು ಮುಸ್ಲಿಂ ಸಮುದಾಯಗಳ ಮಧ್ಯೆ ವಿಷಬೀಜ ಬಿತ್ತುತ್ತಿರುವ ಕಲ್ಲಡ್ಕ ಪ್ರಭಾಕರ್ ವಿರುದ್ಧವಾಗಲಿ, ಪೊಲೀಸ್ ಅಧಿಕಾರಿಯ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿದ ಜಗದೀಶ್ ಕಾರಂತ ವಿರುದ್ಧವಾಗಲಿ ಸರಕಾರ ಯಾವ ಕ್ರಮ ಕೈಗೊಂಡಿದೆ? ಇದನ್ನು ನೋಡಿದಲ್ಲಿ ಸಿಎಂ, ಆರೆಸ್ಸೆಸ್, ಬಿಜೆಪಿ ನಡುವೆ ಒಳಒಪ್ಪಂದವಾಗಿದೆ ಎಂದು ಅನ್ನಿಸುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಗುಡುಗಿದ್ದಾರೆ.  
 
ಬಿಜೆಪಿಯವರಿಗಿಂತ ಸಿಎಂ ಸಿದ್ದರಾಮಯ್ಯ ಯಾವುದರಲ್ಲಿ ಕಡಿಮೆಯಿಲ್ಲ. ಅಹಿಂದ ಹೆಸರು ಹೇಳಿಕೊಂಡು ತಿರುಗುತ್ತಿರುವ ನೀವು ಅವರಿಗಾಗಿ ಏನು ಮಾಡಿದ್ದೀರಿ ಎಂದು ಪ್ರಶ್ನಿಸಿದ್ದಾರೆ?
 
ನಗರಾಭಿವೃದ್ಧಿ ಖಾತೆ ಸಚಿವ ಕೆ.ಜೆ.ಜಾರ್ಜ್ ವಿರುದ್ಧ ದಾಖಲಾಗಿರುವುದು ಕ್ರಿಮಿನಲ್ ಪ್ರಕರಣ. ಅಂತಹ ಸಚಿವರನ್ನು ಸಿಎಂ ಸಿದ್ದರಾಮಯ್ಯ ಸಮರ್ಥಿಸಿಕೊಳ್ಳುತ್ತಿರುವುದು ನಾಚಿಕೆಗೇಡಿತನದ ಸಂಗತಿ ಎಂದು ಜೆಡಿಎಸ್ ಮುಖಂಡ ಎಚ್.ವಿಶ್ವನಾಥ್ ಕಿಡಿಕಾರಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ