ರಾಜ್ಯದಲ್ಲಿ ಬೇಸಿಗೆಯಲ್ಲೂ ಆಲಿಕಲ್ಲು ಮಳೆ

ಶುಕ್ರವಾರ, 17 ಮಾರ್ಚ್ 2023 (10:46 IST)
ಕಲಬುರಗಿ : ರಾಜ್ಯದಲ್ಲಿ ಹವಾಮಾನ ವೈಪರಿತ್ಯ ಹಿನ್ನೆಲೆಯಲ್ಲಿ ಕಲಬುರಗಿಯ ಗಡಿ ಗ್ರಾಮಗಳಲ್ಲಿ ಗುರುವಾರ ಆಲಿಕಲ್ಲು ಮಳೆಯಾಗಿದೆ. ಅಕಾಲಿಕವಾಗಿ ಬಿದ್ದ ಆಲಿಕಲ್ಲು ಮಳೆಯಿಂದಾಗಿ ಗ್ರಾಮಗಳ ರಸ್ತೆಗಳಲ್ಲಿ ಹಿಮಾಲಯದ ವಾತಾವರಣ ನಿರ್ಮಾಣವಾಗಿತ್ತು.

ಚಿಂಚೋಳಿ ತಾಲೂಕಿನ ಗಡಿಗ್ರಾಮಗಳಾದ ಶಿವರಾಂಪುರ, ತೆಲಂಗಾಣದ ಮರಪಲ್ಲಿ, ಕೋಹಿರ್, ಬಂಟಾರಂ, ಪಟ್ಟಲ್ಲುರ್ ಗ್ರಾಮಗಳಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ಆಲಿಕಲ್ಲು ಮಳೆ ಬಿದ್ದಿದೆ. ಬಿರು ಬೇಸಿಗೆಯಲ್ಲಿ ಆಲಿಕಲ್ಲು ಮಳೆ ಕಂಡು ಗ್ರಾಮಸ್ಥರು ದಂಗಾಗಿದ್ದಾರೆ. 

ಇನ್ನೂ ಎರಡು ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ