ಲಂಚ ಪಡೆಯುತ್ತಿದ್ದಾಗಲೇ ಸಿಕ್ಕಿಬಿದ್ದ ಹಾನಗಲ್ ತಹಶೀಲ್ದಾರ್ ಕಚೇರಿ ಶಿರಸ್ತೆದಾರ, ಮತ್ತಿಬ್ಬರ ಬಂಧನ

Sampriya

ಶನಿವಾರ, 18 ಅಕ್ಟೋಬರ್ 2025 (19:22 IST)
ಹಾವೇರಿ: ಜಿಲ್ಲೆಯ ಹಾನಗಲ್ ತಹಶೀಲ್ದಾರ್ ಕಚೇರಿಯಲ್ಲಿ ₹12 ಸಾವಿರ ಲಂಚ ಪಡೆಯುತ್ತಿದ್ದ ಆರೋಪದಡಿ ಶಿರಸ್ತೆದಾರ ಹಾಗೂ ಇಬ್ಬರು ದ್ವಿತೀಯ ದರ್ಜೆ ಸಹಾಯಕರನ್ನು ಅರೆಸ್ಟ್ ಮಾಡಲಾಗಿದೆ.

(ಎಸ್‌ಡಿಎ) ಹಾವೇರಿ ಜಿಲ್ಲಾ ಲೋಕಾಯುಕ್ತ ಪೊಲೀಸರು ಇಂದು ಅವರನ್ನು ಅರೆಸ್ಟ್ ಮಾಡಿದ್ದಾರೆ. 

ಹಾನಗಲ್ ತಾಲ್ಲೂಕಿನ ಬೊಮ್ಮನಹಳ್ಳಿ ಗ್ರಾಮದ ನವೀನ ಬಸನಗೌಡ ಪಾಟೀಲ ಎಂಬುವವರು ನೀಡಿದ್ದ ದೂರು ಆಧಾರದ ಮೇಲೆ ಕಾರ್ಯಚರಣೆಯಲ್ಲಿ ಅವರನ್ನು ಅರೆಸ್ಟ್ ಮಾಡಲಾಗಿದೆ. 


ಪಹಣಿ ಪತ್ರ (ಆರ್‌.ಟಿ.ಸಿ.) ದುರಸ್ತಿ ಮಾಡಿಸಲು ₹ 12 ಸಾವಿರ ಲಂಚ ಪಡೆಯುತ್ತಿದ್ದಾಗಲೇ ಶಿರಸ್ತೆದಾರ ತಮ್ಮಣ್ಣ ಕಾಂಬಳೆ, ಎಸ್‌ಡಿಎ ಗೂಳಪ್ಪ ಮನಗೂಳಿ ಹಾಗೂ ಕೃತ್ಯಕ್ಕೆ ಸಹಕರಿಸಿದ್ದ ಎಸ್‌ಡಿಎ ಶಿವಾನಂದ ಬಡಿಗೇರ್ ಎಂಬುವವರನ್ನುಅರೆಸ್ಟ್‌ ಮಾಡಲಾಗಿದೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ