ತೆಲಂಗಾಣದಲ್ಲಿ ಕೈ ನಾಯಕರ ರಾಜೀನಾಮೆ ..!

ಭಾನುವಾರ, 28 ಆಗಸ್ಟ್ 2022 (17:35 IST)
ತೆಲಂಗಾಣದ ರಾಜ್ಯಸಭಾ ಮಾಜಿ ಸದಸ್ಯ MA ಖಾನ್ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. MA ಖಾನ್ ಅವರು ತಮ್ಮ ರಾಜೀನಾಮೆ ಪತ್ರದಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷವು ತನ್ನ ಹಿಂದಿನ ವೈಭವವನ್ನು ಮರಳಿ ಪಡೆಯುವಲ್ಲಿ, ದೇಶವನ್ನು ಮುನ್ನಡೆಸುವಲ್ಲಿ ಸಾರ್ವಜನಿಕರನ್ನು ಮನವೊಲಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಪಕ್ಷದ ಸಮಿತಿಯ ಉಪಾಧ್ಯಕ್ಷ ಸ್ಥಾನವನ್ನು ರಾಹುಲ್ ಗಾಂಧಿ ನಿಭಾಯಿಸಿದ ನಂತರ ಪಕ್ಷವು ಇಳಿಮುಖಗೊಂಡಿದೆ. ಅವರು ತಮ್ಮದೇ ಆದ ವಿಭಿನ್ನ ಆಲೋಚನಾ ಪ್ರಕ್ರಿಯೆಯನ್ನು ಹೊಂದಿದ್ದಾರೆ. ಇದು ಬ್ಲಾಕ್ ಮಟ್ಟದಿಂದ ಬೂತ್ ಹಂತದವರೆಗೆ ಯಾವುದೇ ಸದಸ್ಯರೊಂದಿಗೆ ಹೊಂದಿಕೆಯಾಗುವುದಿಲ್ಲ ಎಂದು ತಿಳಿಸಿದ್ದಾರೆ. ನಾನು ಕಾಲೇಜು ದಿನಗಳಿಂದಲೂ ಕಾಂಗ್ರೆಸ್ ಪಕ್ಷದೊಂದಿಗೆ ಬಾಂಧವ್ಯ ಹೊಂದಿದ್ದೇನೆ. ಪಂಡಿತ್ ಜವಾಹರ್‌ಲಾಲ್ ನೆಹರೂ, ಇಂದಿರಾಗಾಂಧಿ ಅವರ ನೇತೃತ್ವದಲ್ಲಿ ನಡೆಸಿದಂತಡ ಪಕ್ಷವನ್ನು ಮುನ್ನಡೆಸಲು ಉನ್ನತ ನಾಯಕತ್ವದ ಯಾವುದೇ ಪ್ರಯತ್ನಗಳನ್ನು ಮಾಡದ ಕಾರಣ ನಾನು ರಾಜೀನಾಮೆ ನೀಡಬೇಕಾಯಿತು. ಸಂಜಯ್ ಗಾಂಧಿ ಮತ್ತು ರಾಜೀವ್ ಗಾಂಧಿ ಅವರ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಪಕ್ಷದ ಕಾರ್ಯಾಚರಣೆಗಳಲ್ಲಿ ಭಾಗವಹಿಸುವುದನ್ನು ನಿಲ್ಲಿಸಲು ನಿರ್ಧರಿಸಿದ್ದೇನೆ. ಇದು ಬಿಟ್ಟರೆ ನನಗೆ ಬೇರೆ ದಾರಿ ಇರಲಿಲ್ಲ. ಆದ್ದರಿಂದ ಕಾಂಗ್ರೆಸ್ ಪಕ್ಷದ ವ್ಯವಹಾರಗಳಿಂದ ದೂರವಾಗುವುದು ಬಿಟ್ಟು ನನಗೆ ಬೇರೆ ಆಯ್ಕೆಗಳಿಲ್ಲ. ಹೀಗಾಗಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ನನ್ನ ರಾಜೀನಾಮೆಯನ್ನು ನೀಡುತ್ತಿದ್ದೇನೆ ಎಂದು ಪತ್ರದಲ್ಲಿ ಬರೆದಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ