ಡಿಕೆಶಿ ಸಿಡಿ ಕೇಸ್‌ನ್ನು ಸಿಬಿಐ ತನಿಖೆಗೆ ವಹಿಸಿ- ರಮೇಶ ಜಾರಕಿಹೊಳಿ
ಸಿಡಿ ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು ಎಂದು ಮಾಜಿ ಸಚಿವ, ಗೋಕಾಕ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಸಿಡಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಮುಖ್ಯಮಂತ್ರಿಗೆ ಇ- ಮೇಲ್ ಮೂಲಕ ಪತ್ರ ಬರೆಯಲಾಗಿದೆ.ಇನ್ನು ಡಿ.ಕೆ.ಶಿವಕುಮಾರ ಸಿಡಿ ಫ್ಯಾಕ್ಟರಿ ಬಂದ್ ಆಗಬೇಕಾದರೆ ಪ್ರಕರಣವನ್ನ ಸಿಬಿಐ ತನಿಖೆಗೆ ಒಳಪಡಿಸಬೇಕು ಎಂದು ಶಾಸಕ ರಮೇಶ ಜಾರಕಿಹೊಳಿ ಆಗ್ರಹಿಸಿದ್ದಾರೆ.