ಹನಿಟ್ರ್ಯಾಪ್‌ ಪ್ರಕರಣ ಸಿಬಿಐಗೆ ವಹಿಸಿ: ಪರಮೇಶ್ವರ್‌ಗೆ ಬಸನಗೌಡ ಪಾಟೀಲ್ ಯತ್ನಾಳ್ ಪತ್ರ

Sampriya

ಶುಕ್ರವಾರ, 21 ಮಾರ್ಚ್ 2025 (14:24 IST)
ಬೆಂಗಳೂರು: ರಾಜ್ಯದಲ್ಲಿ ಹನಿಟ್ರ್ಯಾಪ್‌ ಪ್ರಕರಣ ಕೋಲಾಹಲ ಸೃಷ್ಟಿಸಿದೆ. ಸಚಿವರನ್ನೇ ಈ ಹನಿಟ್ರ್ಯಾಪ್‌ಗೆ ಒಳಪಡಿಸಲು ಯತ್ನಿಸಿರುವುದು ವಿಧಾನಸಭೆಯಲ್ಲಿ ಇಂದು ಮತ್ತೆ ಹೈಡ್ರಾಮಾ ನಡೆಯಿತು.

ಈ ಮಧ್ಯೆ ಬಿಜೆಪಿಯ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಗೃಹ ಸಚಿವ ಜಿ.ಪರಮೇಶ್ವರ್‌ ಅವರಿಗೆ ಪತ್ರ ಬರೆದು, ಜನಪ್ರತಿನಿಧಿಗಳ ಭದ್ರತೆಗೆ ಸಿಬಿಐ ಮೂಲಕವೇ ಹನಿಟ್ರ‍್ಯಾಪ್ ತನಿಖೆಯಾಗಲಿ ಎಂದು ಒತ್ತಾಯಿಸಿದ್ದಾರೆ.

ಪತ್ರದಲ್ಲಿ ವಿಧಾನಸಭೆ ಕಲಾಪದಲ್ಲಿ ಬಯಲಾದ ಹನಿಟ್ರ‍್ಯಾಪ್ ವಿಚಾರವನ್ನು ಪ್ರಸ್ತಾಪಿಸಿದ್ದು, ಸಮಗ್ರ ತನಿಖೆಗೆ ಒತ್ತಾಯಿಸಿದ್ದಾರೆ. ಜನಪ್ರತಿನಿಧಿಗಳನ್ನು ಟಾರ್ಗೆಟ್ ಮಾಡಿ ಹನಿಟ್ರ‍್ಯಾಪ್ ಮಾಡಲಾಗುತ್ತಿದೆ. ಜನಪ್ರತಿನಿಧಿಗಳ ಭದ್ರತೆಗಾಗಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಬಜೆಟ್ ಭಾಷಣದ ಮೇಲಿನ ಚರ್ಚೆಯ ಸಂದರ್ಭದಲ್ಲಿ ಗುರುವಾರ ಈ ವಿಚಾರ ಪ್ರಸ್ತಾಪ ಮಾಡಿದ ಯತ್ನಾಳ್, ರಾಜ್ಯದಲ್ಲಿ ಸಹಕಾರಿ ಸಚಿವರ ಮೇಲೆ ಹನಿಟ್ರ‍್ಯಾಪ್ ಮಾಡುವ ಪ್ರಯತ್ನ ಮಾಡಲಾಗಿದೆ. ಇದೊಂದು ಕೆಟ್ಟ ಸಂಸ್ಕೃತಿ. ಜನ ಪ್ರತಿನಿಧಿಗಳನ್ನು ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ ಎಂದು ಪ್ರಸ್ತಾಪಿಸಿದ್ದರು.

ತಕ್ಷಣ ಕೆ.ಎನ್ ರಾಜಣ್ಣ ಮಾತನಾಡಿ, ರಾಜ್ಯದ 48 ರಾಜಕೀಯ ಮುಖಂಡರ ಸಿ.ಡಿ, ಪೆನ್‌ಡ್ರೈವ್ ತಯಾರಾಗಿದೆ. ನನ್ನ ಮೇಲೂ ಹನಿಟ್ರ‍್ಯಾಪ್ ಯತ್ನ ನಡೆದಿದೆ ಸ್ಫೋಟಕ ಮಾಹಿತಿ ನೀಡಿದ್ದು ರಾಜ್ಯದಲ್ಲಿ ಸಂಚಲನ ಮೂಡಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ