‘ಅಮುಲ್ ವಿಚಾರದಲ್ಲಿ ‘ಕೈ’ ರಾಜಕೀಯ
ಗುಜರಾತ್ ರಾಜ್ಯದ ಅಮುಲ್ ಸಂಸ್ಥೆ ರಾಜ್ಯದಲ್ಲಿ ತನ್ನ ಮಾರ್ಕೆಟ್ ವಿಸ್ತರಣೆಗೆ ಮುಂದಾಗಿದ್ದು, ಇದಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿದೆ. BJP ಸರ್ಕಾರ ಅಮುಲ್ಗೆ ಬೆಂಬಲವಾಗಿ ನಿಂತಿದೆ ಎಂದು ಕಾಂಗ್ರೆಸ್ ಆರೋಪಿಸ್ತಿದ್ದು, ಇದಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.. ದೆಹಲಿಯಲ್ಲಿ ಮಾತನಾಡಿದ ಅವರು, ನಂದಿನಿ ಬ್ರ್ಯಾಂಡ್ ರಾಷ್ಟ್ರ ಮಟ್ಟದ ಬ್ರ್ಯಾಂಡ್, ದೇಶದಲ್ಲಿ ನಂದಿನಿ ನಂ.1 ಸ್ಥಾನಕ್ಕೆ ಏರಲಿದೆ. ಅಮುಲ್ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡ್ತಿದೆ, ಅಮುಲ್ ಬ್ರ್ಯಾಂಡ್ ವಿಚಾರವಾಗಿ ಯಾರೂ ಆತಂಕ ಪಡಬೇಕಿಲ್ಲ. ನಂದಿನಿ ಉತ್ಪನ್ನಗಳ ವೃದ್ಧಿಗೆ ಮತ್ತಷ್ಟು ಶ್ರಮ ವಹಿಸಬೇಕಿದೆ ಎಂದು ಸಿಎಂ ತಿಳಿಸಿದ್ರು.