ಸೋಂಕಿತೆಯ ಮೇಲೆ ವೈದ್ಯಕೀಯ ಸಿಬ್ಬಂದಿಗಳಿಂದ ಲೈಂಗಿಕ ಕಿರುಕುಳ

ಗುರುವಾರ, 15 ಏಪ್ರಿಲ್ 2021 (07:11 IST)
ಮುಂಬೈ : ಮುಂಬೈನ  ಉಪನಗರದ  ಅಂಧೇರಿ ಹೋಟೆಲ್ ವೊಂದರಲ್ಲಿ ಕ್ವಾರಂಟೈನ್ ಆದ ಕೊರೊನಾ ಸೋಂಕಿತೆಗೆ ವೈದ್ಯಕೀಯ ಸಿಬ್ಬಂದಿಗಳು ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ.

ಸಂತ್ರಸ್ತೆ ಕೊರೊನಾ ಸೋಂಕಿಗೆ ಒಳಗಾದ ಹಿನ್ನಲೆಯಲ್ಲಿ ಹೋಟೆಲ್ ನಲ್ಲಿ ಕ್ವಾರಂಟೈನ್ ಆಗಿ ಚಿಕಿತ್ಸೆ ಪಡೆಯುತ್ತಿದ್ದಳು. ಅಲ್ಲಿ ವೈದ್ಯಕೀಯ ಸಿಬ್ಬಂದಿಗಳು ಒಂಟಿಯಾಗಿದ್ದ ಮಹಿಳೆಯ ಬಳಿ ಲೈಂಗಿಕ ನೆರವು ಕೇಳಿದ್ದಾರೆ. ಇದಕ್ಕೆ ಒಪ್ಪದಿದ್ದಾಗ ಅಕೆಯ ಮೇಲೆ ಹಲ್ಲೆ ಮಾಡಿದ್ದಾರೆ.

ಈ ಬಗ್ಗೆ ಮಹಿಳೆ ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಮಾಡಿ ಮಾಹಿತಿ ನೀಡಿದ್ದಾಳೆ. ಸಂತ್ರಸ್ತೆಯ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ