ಇಬ್ಬರು ಮಹಿಳಾ ಅಧಿಕಾರಿಗಳಿಗೆ ಸರ್ಕಾರದಿಂದ ಖಡಕ್ ಸೂಚನೆ

ಮಂಗಳವಾರ, 21 ಫೆಬ್ರವರಿ 2023 (11:31 IST)
ಬೆಂಗಳೂರು : ಇನ್ನೊಬ್ಬ ಸರ್ಕಾರಿ ಅಧಿಕಾರಿಯ ವಿರುದ್ಧದ ಆರೋಪಕ್ಕೆ ಮಾಧ್ಯಮ ಬಳಕೆ ಮಾಡಬೇಡಿ. ನಿಮಗೆ ಆರೋಪ ಮಾಡಲು ಸೂಕ್ತ ವೇದಿಕೆಯಿದೆ ಎಂದು ಮಹಿಳಾ ಅಧಿಕಾರಿಗಳಿಗಿಬ್ಬರಿಗೂ ರಾಜ್ಯ ಸರ್ಕಾರ ಖಡಕ್ ಸೂಚನೆ ನೀಡಿದೆ.
 
ರೋಹಿಣಿ ಸಿಂಧೂರಿ, ಡಿ. ರೂಪಾ ಬೀದಿ ರಂಪಾಟ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ರಾಜ್ಯ ಸರ್ಕಾರ ಇಬ್ಬರಿಗೂ ನೋಟಿಸ್ ಜಾರಿ ಮಾಡಿದೆ. ನಿಮಗೆ ಆರೋಪ ಮಾಡಲು ಸೂಕ್ತ ವೇದಿಕೆ ಇದೆ. ಆದರೆ ಅದನ್ನು ಬಿಟ್ಟು ನೀವು ಮಾಧ್ಯಮ ಮುಂದೆ ಹೋಗಿದ್ದೀರಿ.

ಇದರಿಂದ ರಾಜ್ಯ ಸರ್ಕಾರಕ್ಕೆ ಮುಜುಗರ ಆಗಿದೆ. ಇದು ಅಖಿಲ ಭಾರತೀಯ ಸೇವಾ ನಿಯಮಗಳ ಉಲ್ಲಂಘನೆ ಎಂದು ತಿಳಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ