ಹೊಸ ವರ್ಷದ ಸಂಭ್ರಮಾಚರಣೆ ಮಾಡುತ್ತಿದ್ದ ಯುವತಿಗೆ ಕಾಮುಕರಿಂದ ಲೈಂಗಿಕ ಕಿರುಕುಳ

ಬುಧವಾರ, 1 ಜನವರಿ 2020 (09:06 IST)
ಬೆಂಗಳೂರು : ಹೊಸ ವರ್ಷದ ಸಂಭ್ರಮಾಚರಣೆ ಮಾಡುತ್ತಿದ್ದ ಯುವತಿಗೆ ಕಾಮುಕರ ಗುಂಪೊಂದು  ಲೈಂಗಿಕ ಕಿರುಕುಳ ನೀಡಿದ ಘಟನೆ ಕೋರಮಂಗಲದ 5ನೇ ಬ್ಲಾಕ್ ನಲ್ಲಿ ನಡೆದಿದೆ.



ಯುವತಿ ಹೊಸ ವರ್ಷದ ಸಂಭ್ರಮಾಚರಣೆ ಪಾರ್ಟಿಯಲ್ಲಿ ಪಾಲ್ಗೊಂಡಿದ್ದ ವೇಳೆ ಕಾಮುಕರ ಗುಂಪೊಂದು ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದಲ್ಲದೆ ಬೆದರಿಕೆ ಕೂಡ ಹಾಕಿದೆ ಎನ್ನಲಾಗಿದೆ.


ಈ ಬಗ್ಗೆ ಯುವತಿ ಕೋರಮಂಗಲದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು ಪೊಲೀಸರು ಕಾಮುಕರನ್ನು ಪತ್ತೆ ಹಚ್ಚಲು ಸಿಸಿಟಿವಿ ದೃಶ್ಯವನ್ನು ಪರಿಶೀಲಿಸುತ್ತಿದ್ದಾರೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ