ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್
ಕಾಸರಗೋಡು: ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ ನೀಡಿದ ಪ್ರಕರಣ ಸಂಬಂಧ ಆರೋಪಿಯನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಸಕಲೇಶಪುರ ನಿವಾಸಿ ಸುಹೈಬ್(25) ಎಂದು ಗುರುತಿಸಲಾಗಿದೆ. ಸದ್ಯ ಕುಂಬಳೆ ಆರಿಕ್ಕಾಡಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಸಕಲೇಶಪುರ ನಿವಾಸಿ ಎನ್ನಲಾಗಿದೆ.
ಕುಂಬಳೆ ರೈಲು ನಿಲ್ದಾಣದ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಆರೋಪಿ ಕಿರುಕುಳ ನೀಡಿದ್ದಾನೆ.
ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ರೈಲ್ವೆ ನಿಲ್ದಾಣದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ ಪೊಲೀಸರು ಆರೋಪಿಯನ್ನು ಗುರುತಿಸಿ ಕುಂಬಳೆಪೇಟೆಯ ನಾಗರಿಕರ ಸಹಾಯದಿಂದ ಬಂಧಿಸಿದ್ದಾರೆ.