ಬೆಂಗಳೂರು : ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಲೋಕಸಭಾ ಚುನಾವಣೆಗೆ ಫಂಡ್ ಕಲೆಕ್ಷನ್ಗೆ ಇಳಿದಿದೆಯೇ ಎಂದು ಮಾಜಿ ಸಚಿವ ಆರ್.ಅಶೋಕ್ ಪ್ರಶ್ನಿಸಿದರು.
ಪದ್ಮನಾಭನಗರದ ಶಾಸಕರ ಕಚೇರಿಯಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರದ ಗೃಹ ಸಚಿವರಾದ ಅಮಿತ್ ಶಾ ಅವರು ಕಾಂಗ್ರೆಸ್ ಅಧಿಕಾರ ಪಡೆದರೆ ಎಟಿಎಂ ಸರ್ಕಾರದ ಮುನ್ಸೂಚನೆ ಕೊಟ್ಟಿದ್ದರು. ಅವರ ಮಾತು ನೂರಕ್ಕೆ ನೂರು ಸತ್ಯವಾಗಿದೆ ಎಂದು ಟೀಕಿಸಿದರು.
ಹಿಂದೆ ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿ ಆಗಿದ್ದಾಗ ಪೇಸಿಎಂ ಎಂದು ಅಪಪ್ರಚಾರ ಮಾಡಿದ್ದರು. ಈಗ ಪೇ ಕಾಂಗ್ರೆಸ್, ಪೇ ಸಿಎಂ, ಪೇ ಡಿಸಿಎಂ ಆಗಿದೆಯೇ? ನೀವು ಕಳಪೆ ಬಗ್ಗೆ ಮಾತನಾಡುತ್ತೀರಿ. ಶಿವಕುಮಾರ್ ಈ ಕುರಿತು ಮಾತನಾಡಿದ್ದಾರೆ. ಕಳಪೆ ಆದರೆ ಸರ್ಕಾರದ ಕಾನೂನು ಕಟ್ಟಳೆಗಳಿವೆ. ಮಾನದಂಡವೂ ಇದೆ. ಕಾರ್ಪೊರೇಷನ್ನಲ್ಲಿ ಸ್ಕ್ವಾಡ್ ಇದೆ ಎಂದರು.