ಸಚಿವ ಮಂಜು ವಿರುದ್ಧ ಸಿಎಂಗೆ ಕಾಂಗ್ರೆಸ್ ಮುಖಂಡರ ದೂರು

ಶುಕ್ರವಾರ, 20 ಮೇ 2016 (19:01 IST)
ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಎ.ಮಂಜು ಅವರನ್ನು ರಾಜ್ಯ ಸಂಚಿವ ಸಂಪುಟದಿಂದ ಕೈಬಿಡುವಂತೆ ಜಿಲ್ಲಾ ಕಾಂಗ್ರೆಸ್ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ದೂರು ನೀಡಿದ್ದಾರೆ.
 
ಹಾಸನದ ಜಿಲ್ಲಾ ಕಾಂಗ್ರೆಸ್ ಮುಖಂಡರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸ್ವಗ್ರಹಕ್ಕೆ ತೆರಳಿ ಸಚಿವ ಮಂಜು ವಿರುದ್ಧ ದೂರು ಸಲ್ಲಿಸಿದ್ದಾರೆ.
 
ಜಿಲ್ಲಾ ಉಸ್ತುವಾರಿ ಸಚಿವರಾದ ಎ.ಮಂಜು ಅವರು ವರ್ತನೆ ಸರಿಯಾಗಿಲ್ಲ. ಅವರು ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದಿಲ್ಲ. ಎಲ್ಲ ವಿಚಾರದಲ್ಲೂ ಏಕಪಕ್ಷೀಯವಾಗಿ ನಿರ್ಧಾರ ಕೈಗೊಳ್ಳುತ್ತಾರೆ. ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಜಾಯತ್ ಚುನಾವಣೆ ಕೈಗನ್ನಡಿಯಾಗಿದೆ. ಇದೇ ವರ್ತನೆ ಮುಂದುವರೆದರೆ ಜೆಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಅವನತಿ ಕಾಣಬೇಕಾಗುತ್ತದೆ. ತಕ್ಷಣವೇ ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕು ಎಂದು ಜಿಲ್ಲಾ ಕಾಂಗ್ರೆಸ್ ಮುಖಂಡರು ಮುಖ್ಯಮಂತ್ರಿಯವರಿಗೆ ದೂರು ಸಲ್ಲಿಸಿದ್ದಾರೆ.
 
ಸಚಿವರ ವಿರುದ್ಧದ ದೂರನ್ನು ಸ್ವೀಕರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಈ ಕುರಿತು ಚರ್ಚೆ ನಡೆಸಿ ಕ್ರಮ ಕೈಗೊಳ್ಳುವುದಾಗಿ ಮುಖಂಡರಿಗೆ ಭರವಸೆ ನೀಡಿದ್ದಾರೆ.

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ವೆಬ್ದುನಿಯಾವನ್ನು ಓದಿ