ಹಾಸನ: ಅತ್ಯಾಚಾರ ಎಸಗಿ ಬೆಂಕಿ ಹಚ್ಚಿ ಯುವತಿ ಕೊಲೆ?

ಸೋಮವಾರ, 9 ಮೇ 2016 (12:10 IST)
ಯುವತಿಯೊಬ್ಬಳನ್ನು ಬೆಂಕಿ ಹಚ್ಚಿ ಜೀವಂತವಾಗಿ ದಹಿಸಿದ ಘಟನೆ ಹಾಸನದಲ್ಲಿ ನಡೆದಿದೆ. ಅರಸೀಕೆರೆ ತಾಲ್ಲೂಕಿನ ಕರುವಂಕ ಗ್ರಾಮ ಕೆರೆಯಂಗಳದಲ್ಲಿ ಅಪರಿಚಿತ ಯುವತಿಯ ಶವ ಪತ್ತೆಯಾಗಿದ್ದು ಆಕೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರಬಹುದೆಂಬ ಶಂಕೆ ವ್ಯಕ್ತವಾಗಿದೆ.
 
ಯುವತಿ ಧರಿಸಿದ್ದ ಬಟ್ಟೆಗಳು ಚೆಲ್ಲಾಪಿಲ್ಲಿಯಾಗಿದ್ದು ಆಕೆಯ ಮೇಲೆ ಅತ್ಯಾಚಾರವೆಸಗಿ ಕೊಲೆಗೈದಿರಬಹುದೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್ ಕೆ ಶಹಾಪುರ್‌ವಾಡ್ ಅನುಮಾನ ವ್ಯಕ್ತ ಪಡಿಸಿದ್ದಾರೆ. ತನಿಖೆಯ ನಂತರವಷ್ಟೇ ಯುವತಿ ಸಾವಿಗೆ ನಿಜವಾದ ಕಾರಣ ತಿಳಿದು ಬರಲಿದೆ.
 
ಮೃತಳ ಮುಖ ಸಂಪೂರ್ಣ ಸುಟ್ಟು ಹೋಗಿದ್ದು ಆಕೆ ಯಾರೆಂದು ತಿಳಿದು ಬಂದಿಲ್ಲ.
 
ಬಾಣಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಯುವತಿಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ವೆಬ್ದುನಿಯಾವನ್ನು ಓದಿ