ಹಾಸನ: ಗುಡ್ಡಕುಸಿತ ಪ್ರದೇಶಕ್ಕೆ ಎಚ್‌ಡಿಕೆ, ಆರ್‌.ಅಶೋಕ್ ಭೇಟಿ

Sampriya

ಭಾನುವಾರ, 21 ಜುಲೈ 2024 (13:06 IST)
Photo Courtesy X
ಹಾಸನ: ಕಳೆದ ಕೆಲ ದಿನಗಳಿಂದ ನಿರಂತರ ಸುರಿಯುತ್ತಿರುವ ಮಳೆಗೆ ಕುಸಿತಗೊಂಡಿರುವ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸಕಲೇಶಪುರ ದೊಡ್ಡತಪ್ಪಲು ಪ್ರದೇಶಕ್ಕೆ ಕೇಂದ್ರ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ವಿಪಕ್ಷ ನಾಯಕ ಆರ್.ಅಶೋಕ ಭೇಟಿ ನೀಡಿದ್ದಾರೆ.

ಭೇಟಿ ನಂತರ ಮಾಧ್ಯಮದ ಜತೆ ಮಾತನಾಡಿದ ಅವರು, 2018ರಲ್ಲಿ ನಾನು ಸಿಎಂ ಆಗಿದ್ದಾಗ ಇದೇ ರೀತಿ ಮಳೆಯಾಗಿತ್ತು. ಇದೀಗ ಅದೇ ಪರಿಸ್ಥಿತಿ ಉಂಟಾಗಿದೆ. ಇನ್ನೊಂದೆಡೆ ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ನೆರೆಯ ರಾಜ್ಯದ ಜತೆ ಸಂಘರ್ಷಕ್ಕೆ ವಿರಾಮ ಸಿಕ್ಕಿದಂತಾಗಿದೆ.

ಸಕಲೇಶಪುರದಿಂದ ಉದ್ದಕ್ಕೂ ಭೂಕುಸಿತವಾಗುತ್ತಲೇ ಇದೆ. ಎಂಟು ವರ್ಷದ ಹಿಂದಿನಿಂದ ಗುತ್ತಿಗೆದಾರ ಕೆಲಸ ಮಾಡುತ್ತಿದ್ದಾನೆ. ಕಳಪೆ ಹಾಗೂ ಅವೈಜ್ಞಾನಿಕವಾಗಿ ಕಾಮಗಾರಿ ಮಾಡಲಾಗುತ್ತಿದ್ದು, ಈ ಬಗ್ಗೆ ಕೇಂದ್ರ ಭೂಸಾರಿಗೆ ಸಚಿವರಿಗೆ ಮಾಹಿತಿ ಹಂಚಿಕೊಳ್ಳುತ್ತೇನೆ. ಇನ್ನೂ ಇಂತಹ ಸಂದರ್ಭದಲ್ಲಿ ರಾಜಕೀಯ ನಾಯಕರುಗಳು ರಾಜ್ಯದ ಜನತೆಗೆ ಧೈರ್ಯ ತುಂಬುವ ಕೆಲಸ ಮಾಡಬೇಕು. ಈ ನಿಟ್ಟಿನಲ್ಲಿ ನಾನು ನಿನ್ನೆಯಿಂದ ಸಂತ್ರಸ್ತರನ್ನು ಭೇಟಿಯಾಗಿ ಮಾತುಕತೆ ನಡೆಸುತ್ತಿದ್ದೇನೆ ಎಂದರು.

ಈ ವೇಳೆ ಶಾಸಕರಾದ ಸಿಮೆಂಟ್ ಮಂಜು, ಎಚ್.ಪಿ.ಸ್ವರೂಪ್‌ಪ್ರಕಾಶ್, ಸಿ.ಎನ್.ಬಾಲಕೃಷ್ಣ, ಎಚ್.ಕೆ.ಸುರೇಶ್, ಜಿಲ್ಲಾಧಿಕಾರಿ ಸತ್ಯಭಾಮಾ, ಎಸ್ಪಿ ಮೊಹಮ್ಮದ ಸುಜೀತಾ, ಉಪ‌ವಿಭಾಗಾಧಿಕಾರಿ ಡಾ.ಶ್ರುತಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಉಪಸ್ಥಿತರಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ