ಹಾಸನ: ಮಧ್ಯಾಹ್ನದ ಬಿಸಿಯೂಟ ಸೇವಿಸಿದ 100ಕ್ಕೂ ಅಧಿಕ ವಿದ್ಯಾರ್ಥಿಗಳು ಅಸ್ವಸ್ಥ

Sampriya

ಗುರುವಾರ, 26 ಸೆಪ್ಟಂಬರ್ 2024 (19:17 IST)
ಹಾಸನ: ಜಿಲ್ಲೆ‌ಯ ಅರಕಲಗೂಡು ತಾಲೂಕಿನ ರಾಗಿಮರೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಹಲ್ಲಿ ಬಿದ್ದ ಬಿಸಿಯೂಟ ಸೇವಿಸಿ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ನಡೆದಿದೆ.

ಕೂಡಲೇ ಅಸ್ವಸ್ಥಗೊಂಡ ಮಕ್ಕಳನ್ನು ಕೂಡಲೇ ತಾಲೂಕಿನ ಕೊಣನೂರಿನ ಸಮುದಾಯ ಆರೋಗ್ಯ ಕೇಂದ್ರ ಮತ್ತು ಅರಕಲಗೂಡು ತಾಲೂಕು ಆಸ್ಪತ್ರೆಯಲ್ಲಿ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತೀವ್ರ ಅಸ್ವಸ್ಥಗೊಂಡ 8 ಮಕ್ಕಳನ್ನು ಹಾಸನ ಜಿಲ್ಲಾಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ಮಧ್ಯಾಹ್ನದ ಊಟ ಸೇವನೆ ಬಳಿಕ ಮಕ್ಕಳು ವಾಂತಿ ಮಾಡಿಕೊಂಡಿದ್ದಾರೆ.  ಇದನ್ನು ಗಮನಿಸಿದ ಶಿಕ್ಷಕರು ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಮಕ್ಕಳು ವಾಂತಿ ಮಾಡಲು ಮಧ್ಯಾಹ್ನದ ಬಿಸಿಯೂಟಕ್ಕೆ ಹಲ್ಲಿ ಬಿದ್ದಿರುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

ಇದೀಗ ಸುರಕ್ಷತಾ ಕ್ರಮ ವಹಿಸದ ಶಾಲಾ ಶಿಕ್ಷಕರ ವಿರುದ್ಧ ಪೋಷಕರು ಆಕ್ರೋಶ ಹೊರಹಾಕುತ್ತಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ