ಹಾಸನ: ಅಡುಗೆ ವಿಚಾರಕ್ಕೆ ತಾಯಿ ಮಗನ ನಡುವೆ ನಡೆದ ಜಗಳದಲ್ಲಿ ತಾಯಿಯ ಕೊಲೆಯಲ್ಲಿ ಅಂತ್ಯವಾದ ಆಘಾತಕಾರಿ ಘಟನೆ ಆಲೂರಿನ ಕದಾಳುಚನ್ನಾಪುರ ಗ್ರಾಮದಲ್ಲಿ ನಡೆದಿದೆ.
ಮಗನಿಂದ ಕೊಲೆಯಾದ ತಾಯಿಯನ್ನು ಪ್ರೇಮ(45) ಎಂದು ಗುರುತಿಸಲಾಗಿದೆ. ಸಂತೋಷ್ (19) ಹೆತ್ತ ತಾಯಿಯನ್ನೇ ಕೊಲೆಗೈದ ಆರೋಪಿಯಾಗಿದ್ದಾನೆ.
ಮಗ ಸಂತೋಷ್, ಗುರುವಾರ ರಾತ್ರಿ ಕಂಠಪೂರ್ತಿ ಕುಡಿದು ಮನೆಗೆ ಬಂದು ತಾಯಿ ಜತೆ ಅಡುಗೆ ವಿಚಾರವಾಗಿ ಜಗಳವಾಡಿದ್ದಾನೆ. ಕೋಪದಲ್ಲಿ ಮಾತಿಗೆ ಮಾತು ಬೆಳೆದು ದೊಣ್ಣೆಯಿಂದ ತಲೆಗೆ ಬಲವಾಗಿ ಹೊಡೆದಿದ್ದಾನೆ.
ಗಂಭೀರವಾಗಿ ಗಾಯಗೊಂಡಿದ್ದ ಪ್ರೇಮ ಅವರನ್ನು ಹಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಆಲೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.