ಹಾಸನ ದುರಂತ: ಗಾಯಾಳುಗಳನ್ನು ಭೇಟಿಯಾಗಿ, ಪರಿಹಾರ ಘೋಷಿಸಿದ ದೇವೇಗೌಡ

Sampriya

ಶನಿವಾರ, 13 ಸೆಪ್ಟಂಬರ್ 2025 (19:00 IST)
Photo Credit X
ಹಾಸನ: ತಾಲೂಕಿನ ಮೊಸಳೆಹೊಸಳ್ಳಿ ಗ್ರಾಮದಲ್ಲಿ ಗಣೇಶ ಮೆರವಣಿಗೆ ವೇಳೆ ನಡೆದ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಇದೀಗ 10ಕ್ಕೆ ಏರಿಕೆಯಾಗಿದೆ. 

ಇಂದು ಶಿವಯ್ಯನ ಕೊಪ್ಪಲು ಗ್ರಾಮದ‌ ಯುವಕ ಚಂದನ್ (26) ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾನೆ. 

ಗಾಯಾಳುಗಳನ್ನು ಭೇಟಿಯಾಗಲು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ವರು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯವನ್ನು ವಿಚಾರಿಸಿದ್ದಾರೆ.  ಬಳಿಕ ಮೃತರ ಕುಟುಂಬಗಳಿಗೆ ಹಾಗೂ ಗಾಯಾಳುಗಳ ಕುಟುಂಬಕ್ಕೆ ಪರಿಹಾರ ಘೋಷಿಸಿದ್ದಾರೆ.

ಶುಕ್ರವಾರ ಸಂಜೆ ಹಾಸನದ ಮೊಸಳೆ ಹೊಸಳ್ಳಿಯಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ  ಟ್ರಕ್ ಹರಿದು ಹಲವರು ಸಾವನ್ನಪ್ಪಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ. ಕುಟುಂಬಸ್ಥರಿಗೆ ಈ ದುಃಖ ಭರಿಸುವಂತ ಶಕ್ತಿ ಭಗವಂತ ನೀಡಲಿ. ಹಾಸನ ಗಣೇಶ ಮೆರವಣಿಗೆ ದುರಂತದಲ್ಲಿ ಮೃತರಾದವರ ಕುಟುಂಬಸ್ಥರಿಗೆ ಜೆಡಿಎಸ್‌ ಪಕ್ಷದಿಂದಲೂ ಪರಿಹಾರ ನೀಡಲಾಗುತ್ತದೆ. 

ಮೃತರಿಗೆ ತಲಾ 1 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದರು. ಅಲ್ಲದೇ ಗಂಭೀರವಾಗಿ ಗಾಯಗೊಂಡಿರುವವರಿಗೆ ತಲಾ 25 ಸಾವಿರ ಪರಿಹಾರ ನೀಡುವುದಾಗಿ ತಿಳಿಸಿದರು. ಜತೆಗೆ ಸ್ವಲ್ಪ ಪ್ರಮಾಣದಲ್ಲಿ ಗಾಯಗೊಂಡವರಿಗೆ ತಲಾ 20 ಸಾವಿರ ಪರಿಹಾರ ನೀಡಲಾಗುತ್ತದೆ ಎಂದರು.

ಇದೇ ವೇಳೆ ಸರ್ಕಾರ ಕೊಟ್ಟ ಪರಿಹಾರ ಸಾಲಲ್ಲ, ಹೆಚ್ಚಿನ ಪರಿಹಾರ ನೀಡಬೇಕು ಎಂದು ಮಾಜಿ ಪ್ರಧಾನಿಗಳು ಆಗ್ರಹಿಸಿದ್ದಾರೆ. ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸಿದ್ದರಾಮಯ್ಯ ಸೂಚನೆ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ