ಹಾಸನ ಟ್ರಕ್ ದುರಂತಕ್ಕೀಡಾದವರಿಗೆ ಸಿಎಂ ಸಿದ್ದರಾಮಯ್ಯ ಪರಿಹಾರ

Krishnaveni K

ಶನಿವಾರ, 13 ಸೆಪ್ಟಂಬರ್ 2025 (09:04 IST)
ಹಾಸನ: ಗಣೇಶ ಮೆರವಣಿಗೆ ವೇಳೆ ಹಾಸನದಲ್ಲಿ ನಡೆದ ಟ್ರಕ್ ದುರಂತದಲ್ಲಿ ಸಾವಿಗೀಡಾದವರ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ ಪರಿಹಾರ ಘೋಷಿಸಿದ್ದಾರೆ.

ಹಾಸನದಲ್ಲಿ ನಿನ್ನೆ ರಾತ್ರಿ ಗಣೇಶ ಮೆರವಣಿಗೆ ಸಾಗುತ್ತಿದ್ದಾಗ ಟ್ರಕ್ ಹರಿದು 9 ಮಂದಿ ಸಾವನ್ನಪ್ಪಿದ್ದು, 25 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ. ಮೃತರಲ್ಲಿ ಹೆಚ್ಚಿನವರು ಇನ್ನೂ ಚಿಕ್ಕ ವಯಸ್ಸಿನ ವಿದ್ಯಾರ್ಥಿಗಳು. ಗಾಯಗೊಂಡವನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆಗೆ ಸಿಎಂ ಸಿದ್ದರಾಮಯ್ಯ ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು ‘ಹಾಸನದಲ್ಲಿ ಗಣೇಶ ವಿಸರ್ಜನೆಗಾಗಿ ಮೆರವಣಿಗೆಯಲ್ಲಿ ತೆರಳುತ್ತಿದ್ದವರ ಮೇಲೆ ಲಾರಿ ಹರಿದು ಹಲವರು ಸಾವಿಗೀಡಾಗಿ, ಸುಮಾರು 20ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡ ಸುದ್ದಿ ತಿಳಿದು ಅತೀವ ದುಃಖವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಾಳುಗಳು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ.

ಮೃತರ ಕುಟುಂಬಗಳಿಗೆ ಸರ್ಕಾರದ ವತಿಯಿಂದ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು. ಘಟನೆಯಲ್ಲಿ ಗಾಯಗೊಂಡವರ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಇದು ಅತ್ಯಂತ ನೋವಿನ ಘಳಿಗೆ. ಅಪಘಾತ ಸಂತ್ರಸ್ತ ಕುಟುಂಬಗಳ ಜೊತೆ ನಾವೆಲ್ಲರೂ ನಿಲ್ಲೋಣ’ ಎಂದು ಕರೆ ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ