ಯಡಿಯೂರಪ್ಪ ವಿರುದ್ಧ ಕಾಂಗ್ರೆಸ್‌ನಿಂದ ದ್ವೇಷದ ರಾಜಕಾರಣ: ಆರ್‌ ಅಶೋಕ್‌ ಆಕ್ರೋಶ

sampriya

ಶನಿವಾರ, 15 ಜೂನ್ 2024 (16:18 IST)
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ವಿರುದ್ಧ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ ವಾಗ್ದಾಳಿ ನಡೆಸಿದರು.

ಇಂದಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಲೋಕಸಭೆ ಚುನಾವಣೆ ಮುಗಿದ ಕೂಡಲೇ ಯಡಿಯೂರಪ್ಪ ಅವರಿಗೆ ನೋಟಿಸ್ ನೀಡಿದ್ದು, ಇದು ಪಕ್ಕಾ ದ್ವೇಷದ ರಾಜಕಾರಣ. ಇದಕ್ಕೆ ಪೂರಕವಾಗಿ, ನಮ್ಮನ್ನು ಕೋರ್ಟ್‍ಗೆ ಕರೆಸಿದ್ದೀರಿ ಎಂದು ಡಿ.ಕೆ ಶಿವಕುಮಾರ್  ಹೇಳಿದ್ದಾರೆ. ಈ ರೀತಿಯ ದ್ವೇಷದ ರಾಜಕಾರಣ ಸರಿಯಲ್ಲ’ ಎಂದು ಕಿಡಿಕಾರಿದರು.

‘ಈ ದ್ವೇಷದ ರಾಜಕಾರಣ ತಮಿಳುನಾಡಿನಲ್ಲಿದ್ದು, ಇಂದು ಕರ್ನಾಟಕಕ್ಕೂ ಬಂದಿದೆ.  ಗೃಹ ಸಚಿವ ಜಿ. ಪರಮೇಶ್ವರ ಕೂಡಾ ಬಿಎಸ್‍ವೈ ವಿರುದ್ಧ ದೂರು ಕೊಟ್ಟ ಮಹಿಳೆ ಮಾನಸಿಕ ಅಸ್ವಸ್ಥೆ ಎಂದು ಹೇಳಿದ್ದರು. ಚುನಾವಣೆ ಆದ ಮೇಲೆ  ನೊಟೀಸ್ ಕೊಟ್ಟು ದ್ವೇಷದ ರಾಜಕೀಯ ಮಾಡುತ್ತಿದ್ದಾರೆ ಎಂದು ದೂರಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ