ಎರಡು ಗುಂಪುಗಳ ಮಧ್ಯೆ ದ್ವೇಷ ಬಿತ್ತುವ ಭಾಷಣ: ಬೊಮ್ಮಾಯಿ, ಸಿಟಿ ರವಿ, ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್‌

Sampriya

ಸೋಮವಾರ, 11 ನವೆಂಬರ್ 2024 (18:28 IST)
Photo Courtesy X
ಬೆಂಗಳೂರು: ಎರಡು ಗುಂಪುಗಳ ಮಧ್ಯೆ ದ್ವೇಷ ಬಿತ್ತುವ ರೀತಿಯಲ್ಲಿ ಭಾಷಣ ಮಾಡಿದ ಆರೋಪದಡಿಯಲ್ಲಿ ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ, ಪ್ರತಾಪ್ ಸಿಂಹ ಹಾಗೂ ಸಿಟಿ ರವಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಸಂಬಂಧ ಶಿಗ್ಗಾವಿ ಠಾಣೆಯಲ್ಲಿ ಎರಡು ಎಫ್‌ಐಆರ್‌ ದಾಖಲು ಮಾಡಲಾಗಿದೆ.

ನವೆಂಬರ್ 4ರಂದು ರಾಜ್ಯ ಸರ್ಕಾರ ವಕ್ಫ್‌ ಆಸ್ತಿ ಕಬಳಿಸುತ್ತಿದೆ ಎಂದು ಬಿಜೆಪಿ ವತಿಯಿಂದ ಶಿಗ್ಗಾವಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಈ ಬಗ್ಗೆ ಎಸ್‌ಪಿ ಅಂಶುಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿದೆ. ಇದೇ ಸಂದರ್ಭದಲ್ಲಿ ಎರಡು ಗುಂಪುಗಳ ನಡುವೆ ದ್ವೇಷ ಉಂಟು ಮಾಡುವ ರೀತಿಯಲ್ಲಿ ಆರೋಪಿಗಳು ಭಾಷಣ ಮಾಡಿದ್ದರು. ಹೀಗಾಗಿ ಎರಡು ಪ್ರತ್ಯೇಕ ಪ್ರಕರಣ ದಾಖಲಿಸಿಕೊಳ್ಳಾಗಿದೆ ಎಂದು ಹೇಳಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ