‘ಗೆಲುವಿಗೆ ಕಾಂಗ್ರೆಸ್ ಯಾವ ಮಟ್ಟಕ್ಕೆ ಬೇಕಾದರೂ ಇಳಿದೀತು’
ರಾಜ್ಯ ಕಾಂಗ್ರೆಸ್ ಸರ್ಕಾರ ವೀರಶೈವ ಮತ್ತು ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಶಿಫಾರಸ್ಸು ಮಾಡಿರುವುದರ ಬಗ್ಗೆ ಮಾತನಾಡಿದ ದೇವೇಗೌಡರು, ಇದರ ಪರಿಣಾಮ ಯಾವ ರೀತಿ ಇರುತ್ತದೆಂದು ಹೇಳುವುದು ಕಷ್ಟ. ಹಿಂದಿನ ಸರ್ಕಾರ ಈ ಬೇಡಿಕೆ ಒಪ್ಪಿರಲಿಲ್ಲ. ಆದರೆ ಈ ಸರ್ಕಾರ ಚುನಾವಣೆ ಹತ್ತಿರವಿದೆ ಎನ್ನುವಾಗ ಇದಕ್ಕೆ ಒಪ್ಪಿಗೆ ನೀಡಿದೆ. ಇದನ್ನು ನೋಡಿದರೆ ಕಾಂಗ್ರೆಸ್ ಯಾವ ಮಟ್ಟಕ್ಕೆ ಇಳಿಯಲೂ ಸಿದ್ಧ ಎನ್ನುವುದು ಖಾತ್ರಿಯಾಗುತ್ತದೆ ಎಂದು ದೇವೇಗೌಡರು ಟೀಕಿಸಿದ್ದಾರೆ.
ಮತ್ತೊಂದೆಡೆ ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರದಲ್ಲಿ ಜೆಡಿಎಸ್ ತಟಸ್ಥ ಧೋರಣೆ ಅನುಸರಿಸಲಿದೆ ಎಂದು ಅವರು ಹೇಳಿದ್ದಾರೆ.