ಪ್ರಧಾನಿ ಮೋದಿ ಶಾರ್ಪ್ ಮ್ಯಾನ್: ಮಾಜಿ ಪ್ರಧಾನಿ ದೇವೇಗೌಡರ ಹೊಗಳಿಕೆ

ಗುರುವಾರ, 11 ಫೆಬ್ರವರಿ 2021 (10:03 IST)
ನವದೆಹಲಿ: ಪ್ರಧಾನಿ ಮೋದಿ ಬುದ್ಧಿವಂತ, ಶಾರ್ಪ್ ಮ್ಯಾನ್! ಹೀಗಂತ ಹೊಗಳಿರುವುದು ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರಾಧ‍್ಯಕ್ಷ ಎಚ್. ಡಿ. ದೇವೇಗೌಡ.


ಸಂಸತ್ತಿನಲ್ಲಿ ಪ್ರಧಾನಿ ಮೋದಿ ದೇವೇಗೌಡರನ್ನು ಹೊಗಳಿ ಮಾತನಾಡಿದ್ದರು. ಅದಕ್ಕೆ ಪ್ರತಿಕ್ರಿಯೆ ನೀಡಿರುವ ದೇವೇಗೌಡರು ‘ನಾನು ನಡೆದು ಬಂದ ಹಾದಿಯನ್ನು ಚೆನ್ನಾಗಿ ತಿಳಿದುಕೊಂಡೇ ಮೋದಿ ಮಾತನಾಡಿದ್ದಾರೆ. ಅವರಿಗೆ ನನ್ನ ಬಗ್ಗೆ, ನನ್ನ ಹೋರಾಟದ ಬಗ್ಗೆ ಚೆನ್ನಾಗಿ ಗೊತ್ತಿದೆ. ರೈತರ ಪ್ರತಿಭಟನೆ ಬಗ್ಗೆ ಚೆನ್ನಾಗಿ ಮಾತನಾಡಿದರು. ಆದರೆ ಅದರ ಅಂತ್ಯ ಹೇಗೆ ಮಾಡಬೇಕೆಂದು ಹೇಳಿಲ್ಲ. ರೈತರಿಗೆ ಅವರ ನೋವು ಹೇಳಿಕೊಳ್ಳಲು ಸ್ವಾತಂತ್ರ್ಯ ಇದೆ. ರಾಜ್ಯಸಭೆಯಲ್ಲಿ ಕೃಷಿ ಮಸೂದೆ ಪಾಸ್ ಮಾಡಲು ಕೆಲವು ದಿನ ಕಾಲಾವಕಾಶ ತೆಗೆದುಕೊಳ್ಳಬಹುದಿತ್ತು’ ಎಂದು ಅವರು ಹೇಳಿದ್ದಾರೆ. ಅಲ್ಲದೆ, ರಾಜ್ಯದಲ್ಲಿರುವ ಬಿಜೆಪಿ ಸರ್ಕಾರವನ್ನು ಅಸ್ಥಿರಗೊಳಿಸಲು ನಾವು ಪ್ರಯತ್ನಿಸಲ್ಲ. ಯಡಿಯೂರಪ್ಪನವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿ ಎಂದಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ