ದೇವೇಗೌಡರು ಆತ್ಮಹತ್ಯೆ ಮಾಡುವುದಾಗಿ ಹೇಳಿದ್ದರೇ?!
ತುಮಕೂರಿನಲ್ಲಿ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ಮೋದಿ ನಾನು ಅಧಿಕಾರಕ್ಕೆ ಬಂದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಕರ್ನಾಟಕಕ್ಕೆ ಪ್ರಚಾರಕ್ಕೆ ಬರುವಾಗ ದೇವೇಗೌಡರು ಹೇಳಿದ್ದರು. ಆದರೆ ನನಗೆ ಅವರ ಮೇಲೆ ಗೌರವ ಮಾತ್ರ ಇದೆ. ಅವರು ಇನ್ನೂ ನೂರು ಕಾಲ ಬಾಳಿ ಸಮಾಜಕ್ಕೆ ಸೇವೆ ಸಲ್ಲಿಸಲಿ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಇದೇ ವೇಳೆ ಜೆಡಿಎಸ್ ಜತೆಗೆ ಚಾಟಿ ಬೀಸಲು ಅವರು ಮರೆಯಲಿಲ್ಲ. ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ರಹಸ್ಯ ಒಳ ಒಪ್ಪಂದ ಮಾಡಿಕೊಂಡಿದೆ. ಜೆಡಿಎಸ್ ಗೆ ಮತ ಹಾಕಿ ಸುಮ್ಮನೇ ನಿಮ್ಮ ಮತ ನಷ್ಟ ಮಾಡಿಕೊಳ್ಳಬೇಡಿ ಎಂದು ಪ್ರಧಾನಿ ಮೋದಿ ಕರೆ ಕೊಟ್ಟಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.