ಮಂಡ್ಯದಿಂದ ಎಚ್.ಡಿ.ಕುಮಾರಸ್ವಾಮಿ ಸ್ಪರ್ಧೆ: ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಜೆಡಿಎಸ್
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಠಕ್ಕರ್ ಕೊಡುವ ನಿಟ್ಟಿನಲ್ಲಿ ಮೈತ್ರಿ ಮಾಡಿಕೊಂಡಿರುವ ಬಿಜೆಪಿ ಹಾಗೂ ಜೆಡಿಎಸ್ 28 ಕ್ಷೇತ್ರಗಳ ಫೈಕಿ ಬಿಜೆಪಿ 25 ಜೆಡಿಎಸ್ ಮೂರು ಕ್ಷೇತ್ರಗಳನ್ನ ಹಂಚಿಕೊಂಡಿದ್ದು, ಜೆಡಿಎಸ್ ಕೊನೆಗೂ ಅಭ್ಯರ್ಥಿಗಳ ಆಯ್ಕೆ ಫೈನಲ್ ಮಾಡಿದೆ.
ಬಹಳಷ್ಟು ಕುತೂಹಲ ಕೆರಳಿಸಿದ ಚಲನಚಿತ್ರ ನಟಿ ಸುಮಲತಾ ಪ್ರತಿನಿಧಿಸುತ್ತಿರುವ ಮಂಡ್ಯ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಸ್ಪರ್ಧಿಸಲಿದ್ದಾರೆ. ಉಳಿದಂತೆ ಹಾಸನದಿಂದ ಪ್ರಜ್ವಲ್ ರೇವಣ್ಣ ಹಾಗೂ ಕೋಲಾರದಿಂದ ಮಲ್ಲೇಶ್ ಬಾಬು ಅವರನ್ನು ಜೆಡಿಎಸ್ ಕಣಕ್ಕಿಳಿಸಿದೆ.