ಹೆಚ್.ಡಿ ಕುಮಾರಸ್ವಾಮಿ ಮಕ್ಕಳಂತೆ ಹಠ ಮಾಡ್ತಾರೆ : ಅನಿತಾ ಕುಮಾರಸ್ವಾಮಿ

ಮಂಗಳವಾರ, 25 ಏಪ್ರಿಲ್ 2023 (15:21 IST)
ರಾಮನಗರ : ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ಮಕ್ಕಳಂತೆ ಹಠ ಮಾಡ್ತಾರೆ, ಸರಿಯಾಗಿ ಊಟಾನೆ ಮಾಡಲ್ಲ ಎಂದು ಪತ್ನಿ ಅನಿತಾ ಕುಮಾರಸ್ವಾಮಿ ಹೇಳಿದ್ದಾರೆ.

ಹೆಚ್ಡಿಕೆ ಅವರ ಆರೋಗ್ಯ ವಿಚಾರ ಕುರಿತು ಚನ್ನಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ಊಟದ ವಿಚಾರದಲ್ಲಿ ಮಕ್ಕಳಂತೆ ಹಠ ಮಾಡುತ್ತಾರೆ. ಬರೀ ಮೊಸರನ್ನ ತಿನ್ನುತ್ತಾರೆ.

ಹೆಚ್ಚು ನೀರು ಕುಡಿಯಲ್ಲ, ಸರಿಯಾಗಿ ಊಟ ಮಾಡಲ್ಲ. ಹೀಗಾಗಿ ಅನಾರೋಗ್ಯ ಕಾಣಿಸಿಕೊಂಡಿತ್ತು. ಆಸ್ಪತ್ರೆಗೆ ದಾಖಲಾಗಿ ಒಂದು ದಿನ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಸದ್ಯ ಸ್ವಲ್ಪ ಚೇತರಿಸಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ. 

ಚನ್ನಪಟ್ಟಣದಲ್ಲಿ  ಹೆಚ್ಡಿಕೆ ಪರ ಪ್ರಚಾರ ಮಾಡಿದ ಅನಿತಾ ಕುಮಾರಸ್ವಾಮಿ, ಕ್ಷೇತ್ರದ ಹಲವು ಗ್ರಾಮಗಳಿಗೆ ಭೇಟಿ ನೀಡಿದರು. ಈ ವೇಳೆ ಮಾತನಾಡುತ್ತಾ, ನಾನು ಚನ್ನಪಟ್ಟಣದಾದ್ಯಂತ ಪ್ರಚಾರ ಮಾಡುತ್ತಿದ್ದು, ಕ್ಷೇತ್ರದ ಜನರು ಉತ್ತಮ ರೀತಿಯಲ್ಲಿ ಸ್ಪಂದಿಸುತ್ತಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ