2024 ಕ್ಕೆ ಎಲೆಕ್ಷನ್, ಡಿಕೆಶಿ ತಿಹಾರ್ ಜೈಲಿಗೆ ಹೋಗ್ತಾರೆ: ಕುಮಾರಸ್ವಾಮಿ ಭವಿಷ್ಯ

ಸೋಮವಾರ, 9 ಅಕ್ಟೋಬರ್ 2023 (09:40 IST)
ಬೆಂಗಳೂರು: ಮುಂದಿನ ಲೋಕಸಭೆ ಚುನಾವಣೆ ಬಳಿಕ ರಾಜ್ಯ ಸರ್ಕಾರ ಪತನವಾಗಲಿದೆ, ಡಿಕೆ ಶಿವಕುಮಾರ್ ತಿಹಾರ್ ಜೈಲಿಗೆ ಹೋಗೋದು ಖಚಿತ ಎಂದು ಮಾಜಿ ಸಿಎಂ, ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ.

ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡಿರುವ ಬೆನ್ನಲ್ಲೇ ಕುಮಾರಸ್ವಾಮಿಯವರ ಈ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿದೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಕುಮಾರಸ್ವಾಮಿ ‘ಇಷ್ಟು ಕೆಟ್ಟ ಸರ್ಕಾರವನ್ನು ನೋಡೇ ಇಲ್ಲ. ಆಂತರಿಕ ಕಚ್ಚಾಟದಿಂದಲೇ ಈ ಸರ್ಕಾರ ಪತನವಾಗುತ್ತದೆ.  2024 ರಲ್ಲಿ ಮತ್ತೆ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯುವುದು ಖಚಿತ. ಆ ಚುನಾವಣೆಗೆ ಆ ವ್ಯಕ್ತಿ (ಡಿಕೆಶಿ) ಅಭ್ಯರ್ಥಿಯಾಗುವುದೇ ಅನುಮಾನ. ಯಾಕೆಂದರೆ ಅವರು ಸದ್ಯದಲ್ಲೇ ತಿಹಾರ್ ಜೈಲಿಗೆ ಹೋಗುತ್ತಾರೆ’ ಎಂದು ಭವಿಷ್ಯ ನುಡಿದಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ