ದೆಹಲಿಯಲ್ಲಿರುವ ಕರ್ನಾಟಕದ ಕಾಂಗ್ರೆಸ್ ಉಸ್ತುವಾರಿ ದಿಗ್ವೀಜಯ್ ಸಿಂಗ್ ಅವರ ನಿವಾಸಕ್ಕೆ ತೆರಳಿದ ಜೆಡಿಎಸ್ ಶಾಸಕ ಜಮೀರ್ ಅಹ್ಮದ್, ರಾಜ್ಯಸಭೆಗೆ ಸ್ಪರ್ಧೆ ಮಾಡುವ ಕಾಂಗ್ರೆಸ್ ಪಕ್ಷದ ಮೂರನೇಯ ಅಭ್ಯರ್ಥಿಗೆ ಬೆಂಬಲ ಸೂಚಿಸುವುದಾಗಿ ಭರವಸೆ ನೀಡಿರುವು ವಿಚಾರವಾಗಿ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿರುವ ಎಚ್.ಡಿ.ಕುಮಾರಸ್ವಾಮಿ, ಜಮೀರ್ ಅಹ್ಮದ್ ನನಗೆ ತಿಳಿಸಿಯೇ ದೆಹಲಿಗೆ ತೆರಳಿದ್ದು, ತಮ್ಮ ಸ್ನೇಹಿತರನ್ನು ಭೇಟಿಮಾಡಿ ಬರಲಿದ್ದಾರೆ ಎಂದು ಉತ್ತರಿಸಿದರು.
ಕಾಂಗ್ರೆಸ್ನ ಐವರು ಶಾಸಕರು ನನ್ನು ಮಿತ್ರರು, ಅವರು ಜೆಡಿಎಸ್ ಪಕ್ಷಕ್ಕೆ ಬೆಂಬಲ ನೀಡುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿಯವರು ನಮ್ಮ ಪಕ್ಷದ ಒಗ್ಗಟ್ಟನ್ನು ಒಡೆಯಲು ಪ್ರಯತ್ನಿಸುತ್ತಿದ್ದಾರೆ. ನನಗೂ ಕಾಂಗ್ರೆಸ್ ಪಕ್ಷದ ಮತಗಳನ್ನು ಪಡೆಯುವ ಶಕ್ತಿ ಇದೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.