ಬೆಂಗಳೂರು: ಮನೆಕೆಲಸದಾಕೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಕ್ಕೊಳಗಾಗಿರುವ ಮಾಜಿ ಸಚಿವ ಎಚ್ ಡಿ ರೇವಣ್ಣ ಜಾಮೀನು ಅರ್ಜಿ ಇಂದು ನಿರ್ಧಾರವಾಗಲಿದೆ. ನಿನ್ನೆ ಅವರಿಗೆ ಒಂದು ದಿನದ ಮಟ್ಟಿಗೆ ಮಧ‍್ಯಂತರ ಜಾಮೀನು ಸಿಕ್ಕಿತ್ತು.
ಇದಕ್ಕೆ ಮೊದಲು ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಎಸ್ಐಟಿ ತಂಡ ಬಂಧಿಸಿತ್ತು. 11 ದಿನಗಳ ಕಾಲ ನ್ಯಾಯಾಂಗ ಬಂಧನ ಅನುಭವಿಸಿದ್ದ ರೇವಣ್ಣ ಮೊನ್ನೆಯಷ್ಟೇ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಇದರ ನಡುವೆ ಅವರು ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲೂ ಆರೋಪಿಯಾಗಿದ್ದರು.
ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಅವರಿಗೆ ಒಂದು ದಿನದ ಮಟ್ಟಿಗೆ ರಿಲೀಫ್ ನೀಡಿತ್ತು. ಇಂದು ಎಸಿಎಂಎಂ ಕೋರ್ಟ್ ನಲ್ಲಿ ಜಾಮೀನು ಅರ್ಜಿ ವಿಚಾರಣೆಗೆ ಬರಲಿದೆ. ನಿನ್ನೆ ಮಧ‍್ಯಂತರ ಜಾಮೀನು ಪಡೆದ ಬಳಿಕ ನಿರಾಳರಾದಂತೆ ಕಂಡುಬಂದಿದ್ದ ರೇವಣ್ಣ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ್ದರು.
ಇದೇ ಪ್ರಕರಣದಲ್ಲಿ ಅವರ ಪುತ್ರ ಪ್ರಜ್ವಲ್ ರೇವಣ್ಣ ಕೂಡಾ ಪ್ರಮುಖ ಆರೋಪಿಯಾಗಿದ್ದಾರೆ. ಅವರು ವಿದೇಶದಲ್ಲಿ ತಲೆಮರೆಸಿಕೊಂಡಿದ್ದು ಇದುವರೆಗೆ ಎಸ್ಐಟಿ ವಿಚಾರಣೆಗೆ ಹಾಜರಾಗದೇ ತಪ್ಪಿಸಿಕೊಳ್ಳುತ್ತಿದ್ದಾರೆ. ಪ್ರಜ್ವಲ್ ವಿರುದ್ಧ ರೇಪ್ ಕೇಸ್ ಕೂಡಾ ದಾಖಲಾಗಿದೆ.