ಎಚ್ ಡಿ ರೇವಣ್ಣ ಕೊನೆಗೂ ಜೈಲಿನಿಂದ ಬಿಡುಗಡೆ

Krishnaveni K

ಮಂಗಳವಾರ, 14 ಮೇ 2024 (15:27 IST)
ಬೆಂಗಳೂರು: ಮಹಿಳೆಯ ಅಪಹರಣ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಮಾಜಿ ಸಚಿವ ಎಚ್ ಡಿ ರೇವಣ್ಣ ಇದೀಗ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ನಿನ್ನೆಯೇ ನ್ಯಾಯಾಲಯ ಅವರಿಗೆ ಜಾಮೀನು ಮಂಜೂರು ಮಾಡಿತ್ತು.

ಎಸ್ಐಟಿ ಸೂಕ್ತ ಸಾಕ್ಷ್ಯ ಒದಗಿಸಲು ವಿಫಲವಾದ ಹಿನ್ನಲೆಯಲ್ಲಿ ನ್ಯಾಯಾಲಯ ನಿನ್ನೆ ಅವರಿಗೆ ಜಾಮೀನು ಮಂಜೂರು ಮಾಡಿತ್ತು. ಕಳೆದ 11 ದಿನಗಳಿಂದ ಅವರು ಬಂಧನಲ್ಲಿದ್ದರು. ನ್ಯಾಯಾಂಗ ಬಂಧನದಲ್ಲಿದ್ದ ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿತ್ತು.

ಇಂದು ನ್ಯಾಯಾಲಯದ ಆದೇಶ ಪ್ರತಿ ನೀಡಿದ ಬಳಿಕ ಜೈಲಿನಿಂದ ಅವರನ್ನು ಬಿಡುಗಡೆ ಮಾಡಲಾಗಿದೆ. ರೇವಣ್ಣನನ್ನು ಎದುರುಗೊಳ್ಳಲು ನೂರಾರು ಜೆಡಿಎಸ್ ಕಾರ್ಯಕರ್ತರು ಹಾಜರಿದ್ದರು. ರೇವಣ್ಣ ಹೊರಗೆ ಬರುತ್ತಿದ್ದಂತೇ ಕಾರ್ಯಕರ್ತರು ಹರ್ಷೋದ್ಘಾರ ಮಾಡಿದರು. ಈ ವೇಳೆ ಅವರನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಬೇಕಾಯಿತು.

ನಿನ್ನೆಯೇ ಅವರಿಗೆ ಜಾಮೀನು ಸಿಕ್ಕ ಸುದ್ದಿ ತಿಳಿಯುತ್ತಿದ್ದಂತೇ ಹೊಳೆನರಸೀಪುರದಲ್ಲಿ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿತ್ತು. ಇಂದು ಮನೆಗೆ ಬಂದಾಗ ಗೇಟ್ ಬಳಿ ನಿಂತಿದ್ದ ಕಾರ್ಯಕರ್ತರ ಜೊತೆ ಮಾತನಾಡಿದ ಬಳಿಕವಷ್ಟೇ ಒಳಗೆ ತೆರಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ