ಬಿಜೆಪಿಗೆ ಪರ್ಯಾಯ ರಾಜಕೀಯ ಶಕ್ತಿ ಕುರಿತು ವಿಜಯದಶಮಿಗೆ ನಿರ್ಧಾರ: ಕೆಸಿಎಆರ್/ಹೆಚ್‌ಡಿಕೆ

ಗುರುವಾರ, 26 ಮೇ 2022 (21:49 IST)

ಬೆಂಗಳೂರು: ಮುಂದಿನ ದಸರಾ-ವಿಜಯದಶಮಿ ಹೊತ್ತಿಗೆ ದೇಶದಲ್ಲಿ ಬಿಜೆಪಿಗೆ ಪರ್ಯಾಯವಾದ ರಾಜಕೀಯ ಶಕ್ತಿಯನ್ನು ರೂಪಿಸುವ ಬಗ್ಗೆ ತೆಲಂಗಾಣ ರಾಜ್ಯದ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್‌ ಇಂದು ಬೆಂಗಳೂರಿನಲ್ಲಿ ಇಂದು ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ ಅವರನ್ನು ಭೇಟಿ ಮಾಡಿ ಮಹತ್ವದ ಸಮಾಲೋಚನೆ ನಡೆಸಿದರು.

ಬೆಂಗಳೂರಿನ ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ಇಂದು ಭೇಟಿ ನೀಡಿದ ಕೆಸಿಆರ್ ಅವರು, ಸುಮಾರು ಮೂರೂವರೆ ಗಂಟೆಗೂ ಹೆಚ್ಚುಕಾಲ ಗೌಡರ ಜತೆ ರಾಜಕೀಯ ವಿದ್ಯಮಾನಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಿದರು. ಈ ಸಭೆಯಲ್ಲಿ ದೇವೇಗೌಡರು, ಕೆಸಿಎಆರ್‌ ಅರೊಂದಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಜೆಡಿಎಸ್‌ ರಾಜ್ಯ ಯುವಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಅವರು ಭಾಗಿಯಾಗಿದ್ದರು.

ಕರ್ನಾಟಕದ ರಾಜಕೀಯವೂ ರಾಷ್ಟ್ರ ರಾಜಕಾರಣದ ಬಗ್ಗೆ ಸಮಗ್ರವಾಗಿ ಕೆಸಿಆರ್‌ ಅವರು ದಳಪತಿಗಳ ಜತೆ ಮಾತುಕತೆ ನಡೆಸಿದರು.

ಸುದೀರ್ಘ ಸಭೆಯ ನಂತರ ಕೆ.ಚಂದ್ರಶೇಖರ ರಾವ್‌ ಮತ್ತು ಕುಮಾರಸ್ವಾಮಿ ಅವರು ಮಾಧ್ಯಮಗಳ ಜತೆ ಮಾತನಾಡಿದರು.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ