ಗೋವಾ ಸಿಎಂ ಜತೆ ಮಾತುಕತೆ ನಡೆಸಿದ ಎಚ್‌ಡಿಕೆ,ನಿಖಿಲ್!
ಲೋಕಸಭೆ ಚುನಾವಣೆಗೆ ಬಿಜೆಪಿಯೊಂದಿಗೆ ಮೈತ್ರಿಯಾದ ತಿಂಗಳ ಬಳಿಕ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿ ಅವರೊಂದಿಗೆ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.ಹಾಗೂ ಎನ್.ಡಿ.ಎ ಜತೆ ಜೆಡಿಎಸ್ ಮೈತ್ರಿ ವಿಚಾರದಲ್ಲಿ ಉಂಟಾಗಿರುವ ಬೆಳವಣಿಗೆ ಬಗ್ಗೆ ಸಮಾಲೋಚನೆ ನಡೆಸಿದರು ಎಂದು ಹೇಳಲಾಗಿದೆ.