ವಿಧಾನಸೌಧದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು, ಕಳೆದ ಎರಡು ದಿನಗಳಿಂದ ಪಠ್ಯ ಪುಸ್ತಕ ವಿಚಾರದಲ್ಲಿ ಗೊಂದಲ ಇದೆ. ನಾಡಗೀತೆ ವಿಚಾರದಲ್ಲಿ ಹಲವು ರೀತಿ ಕೆಟ್ಟ ಬೆಳೆವಣಿಗೆಗಳು ಆಗುತ್ತಿವೆ. ನಾಡಗೀತೆಗೆ ಅವಮಾನ ಮಾಡಲಾಗುತ್ತಿದೆ ಎಂದು ಅವರು ಕಿಡಿ ಕಾರಿದರು.
ಪಠ್ಯಪುಸ್ತಕ ಪರಿಷ್ಕರಣೆ ಸಮಿತಿ ಅಧ್ಯಕ್ಷ ರೋಹಿತ್ ಚಕ್ರವರ್ತಿ ಹೆಸರು ಹೇಳದೆಯೇ ತರಾಟೆಗೆ ತೆಗೆದುಕೊಂಡ ಅವರು, ಹಿಂದೆ ಸಾಮಾಜಿಕ ಜಾಲತಾಣದಲ್ಲಿ ನಾಡಗೀತೆ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ ವ್ಯಕ್ತಿಯನ್ನು ಸಮಿತಿ ಅಧ್ಯಕ್ಷನನ್ನಾಗಿ ಮಾಡಿರುವುದೇ ತಪ್ಪು. ಕುವೆಂಪು ಮತ್ತು ನಾಡಗೀತೆಗೆ ಅಪಮಾನ ಮಾಡಿದರೆ ಸುಮ್ಮನಿರುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ಕುವೆಂಪು ಅನೇಕರ ಪ್ರೋತ್ಸಾಹದಿಂದ ಕವಿ ಆದರಂತೆ.
ಅವನ ಹಿನ್ನೆಲೆ ಏನು? ಎಂದು ರೋಹಿತ್ ಚಕ್ರವರ್ತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.