ಅವಕಾಶ ಸಿಕ್ಕಾಗಲೆಲ್ಲ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಆರೋಪಿ
ಸೋಮವಾರ, 30 ಆಗಸ್ಟ್ 2021 (09:56 IST)
ಮೈಸೂರು: ಯುವತಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮೂಲದ ಐವರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ತೀವ್ರ ವಿಚಾರಣೆಗೊಳಪಡಿಸಿದ್ದಾರೆ. ಈ ವೇಳೆ ಪೊಲೀಸರಿಗೆ ಹಲವು ಮಾಹಿತಿ ಲಭ್ಯವಾಗಿದೆ.
ಅತ್ಯಾಚಾರದಲ್ಲಿ ಭಾಗಿಯಾಗಿದ್ದ ಆರೋಪಿಗಳ ಪೈಕಿ ಓರ್ವ ಅವಕಾಶ ಸಿಕ್ಕಾಗಲೆಲ್ಲ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಎಂದು ತಿಳಿದುಬಂದಿದೆ. ಅಂತೆಯೇ ಆರೋಪಿಯು ಸದಾ ತನ್ನ ಬಳಿ ಕಾಂಡೋಮ್ ಇಟ್ಟುಕೊಂಡಿರುತ್ತಿದ್ದ ಎಂಬ ವಿಚಾರವೂ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಉಳಿದ ಆರೋಪಿಗಳು ದರೋಡೆ ನಡೆಸಿ ಹಣಕ್ಕೆ ಬೇಡಿಕೆ ಇಡುತ್ತಿದ್ದರೆ, ಈತ ಹೆಣ್ಣುಮಕ್ಕಳನ್ನು ತನ್ನಿಚ್ಛೆಯಂತೆ ಬಳಸಿಕೊಳ್ಳಲು ಹೊಂಚುಹಾಕುತ್ತಿದ್ದ ಎಂಬುದು ಗೊತ್ತಾಗಿದೆ.
ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ನಡೆದ ಅತ್ಯಾಚಾರ ಸ್ಥಳದಲ್ಲೂ ಕಾಂಡೋಮ್ ಸಿಕ್ಕಿದ್ದು, ಅದು ಈತನದ್ದೇ ಎಂದು ಹೇಳಲಾಗಿದೆ.