ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಾಗೇಂದ್ರ ಕ್ಯಾನ್ಸರ್ ನಿಂದ ಬಳಲುತ್ತಿದ್ದ. ಮಾನಸಿಕ ಖಿನ್ನತೆಗೆ ಒಳಗಾಗಿದ್ದ. ಹೀಗಾಗಿ ಸಂಸಾರದ ನೌಕೆ ಮುನ್ನೆಡಸಲು ಕಷ್ಟವಾಗಿತ್ತು. ಹೆಂಡ್ತಿ ಕೆಲಸಕ್ಕೆ ಹೋಗಿ ಕುಟುಂಬದ ನಿರ್ವಹಣೆ ನಡೆಸುತ್ತಿದ್ದಳು. ಈ ಮಧ್ಯೆ ಇಬ್ಬರ ನಡುವೆ ಕೌಟುಂಬಿಕ ಕಲಹ ಏರ್ಪಟ್ಟಿದೆ. ಇದರಿಂದ ಮನನೊಂದಿದ್ದ ನಾಗೇಂದ್ರ, ಹೆಂಡ್ತಿ ಮಕ್ಕಳಿಗೆ ವಿಷದ ಊಟ ತಿನ್ನಿಸಿ ಸಾವಿಗೆ ಕಾರಣನಾಗಿದ್ದಾನೆ. ಕೃತ್ಯವೆಸಗಿದ ಬಳಿಕ ಡೋರ್ ಲಾಕ್ ಮಾಡಿಕೊಂಡು ಚಾಕುವಿನಿಂದ ಕೈಕುಯ್ದುಕೊಂಡು ಆತ್ಮಹತ್ಯೆಗೆ ಮುಂದಾಗಿದ್ದ. ಅಷ್ಟೊತ್ತಿಗಾಗಲೇ ಹೆಂಡತಿ ಸಹೋದರ ಬಂದು ರಕ್ಷಣೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.