ಹಾವೇರಿಯಲ್ಲಿ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ: ಬೆಂಗಳೂರಿನ ನಾಲ್ವರು ದುರ್ಮರಣ

Sampriya

ಬುಧವಾರ, 25 ಡಿಸೆಂಬರ್ 2024 (14:41 IST)
ಹಾವೇರಿ: ಜಿಲ್ಲೆಯ ತಡಸ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಬೆಂಗಳೂರು ಮೂಲದ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ.

ಮೃತರನ್ನು ಬೆಂಗಳೂರು ಚಾಮರಾಜಪೇಟೆಯ ಚಂದ್ರಮ್ಮ (59), ಅವರ ಮಗಳು ದಾವಣಗೆರೆ ಜಿಲ್ಲೆಯ ಹರಿಹರದ ಮೀನಾ (38), ಕಾರು ಚಾಲಕ ಮಹೇಶಕುಮಾರ ಸಿ. (41) ಹಾಗೂ ಹರಿಹರದ ಧನ್ವೀರ್ (11) ಎಂದು ಗುರುತಿಸಲಾಗಿದೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ಅತೀ ವೇಗವಾಗಿ ಹೊರಟಿದ್ದ ಎರಡು ಕಾರುಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ. ಒಂದು ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲಿ ಮೃತಪಟ್ಟಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಇನ್ನಿಬ್ಬರನ್ನು ಹುಬ್ಬಳ್ಳಿ‌ ಕಿಮ್ಸ್‌ಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿಯೇ ಅವರಿಬ್ಬರು ಅಸುನೀಗಿದ್ದಾರೆ.

ಇನ್ನೊಂದು ಕಾರಿನಲ್ಲಿದ್ದ ಚಾಲಕ ಹಾಗೂ ಇತರರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ