ಕಾರ್ಯಕ್ರಮದಲ್ಲಿ ಮಾತನಾಡಿದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಕೊವಿಡ್ ಸಂದರ್ಭದಲ್ಲಿ ನಿಮ್ಹಾನ್ಸ್ ನೇತೃತ್ವದಲ್ಲಿ, ಅನೇಕ ಕೊರೊನಾ ರೋಗಿ ಹಾಗೂ ಕುಟುಂಬದವರ ಮಾನಸಿಕ ಆರೋಗ್ಯ ನಿರ್ವಹಣೆಗೆ ಒತ್ತು ನೀಡಲಾಯಿತು. ಕೆಲ ಪ್ರಕರಣಗಳಲ್ಲಿ ಆತ್ಮಹತ್ಯೆಯ ಘಟನೆಯೂ ನಡೆಯಿತು. ಆ ವೇಳೆ ಅನೇಕರಿಗೆ ಮಾನಸಿಕ ಆರೋಗ್ಯ ಆಪ್ತ ಸಮಾಲೋಚನೆ ಸೇವೆ ನೀಡಲಾಯಿತು. ಇದನ್ನು ಇನ್ನಷ್ಟು ಮುಂದುವರಿಸಲಾಗುತ್ತಿದೆ. ಮಾನಸಿಕ ಆರೋಗ್ಯವು ದೈಹಿಕ ಆರೋಗ್ಯದ ಮೇಲೆ ಪರಿಣಾಮ ಬೀರುವ ಅಂಶ. ಮೆದುಳಿನ ಆರೋಗ್ಯ ಇಡೀ ದೇಹದ ಒಟ್ಟು ಆರೋಗ್ಯ ಕಾಪಾಡಲು ಅಗತ್ಯವಾಗಿದೆ. ನಿಮ್ಹಾನ್ಸ್ ಜನರ ಬಳಿಯೇ ಹೋಗಿ ಆರೋಗ್ಯ ಸೇವೆ ನೀಡುವಂತಹ ಪ್ರತಿಷ್ಠಿತ ಸಂಸ್ಥೆಯಾಗಿದೆ. ಸಾಮಾನ್ಯ ಫಿಸಿಶೀಯನ್ ಕೂಡ ಮಾನಸಿಕ ಆರೋಗ್ಯ ಸೇವೆ ನೀಡುವಂತೆ ನಿಮ್ಹಾನ್ಸ್ ತರಬೇತಿ ನೀಡಲಿದೆ ಎಂದು ತಿಳಿಸಿದ್ದಾರೆ.