ಆರೋಗ್ಯ ಸಮಸ್ಯೆ ಹಿನ್ನಲೆ; ರಾಜ್ಯಾಧ್ಯಕ್ಷ ಸ್ಥಾನದಿಂದ ಹಿಂದೆ ಸರಿಯಲು ನಿರ್ಧರಿಸಿದ ಎಚ್.ವಿಶ್ವನಾಥ್

ಮಂಗಳವಾರ, 1 ಜನವರಿ 2019 (14:06 IST)
ಬೆಂಗಳೂರು : ಆರೋಗ್ಯ ಸಮಸ್ಯೆ ಇರುವ ಹಿನ್ನಲೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ.


 ಈ ಬಗ್ಗೆ ಮಾತನಾಡಿದ ಅವರು,’ ಆರೋಗ್ಯ ಸಮಸ್ಯೆ ಇರುವ ಕಾರಣ ಜವಬ್ದಾರಿ ನಿಭಾಯಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಜವಬ್ದಾರಿ ವಾಪಾಸ್ ಪಡೆಯಿರಿ ಅಂತ ಕೇಳಬೇಕು’ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಅವರು ಹೇಳಿದ್ದಾರೆ.
‘ಜನವರಿ 5 ರಂದು ಜೆಡಿಎಸ್ ಸಭೆ ಇದೆ. ಸಭೆಯಲ್ಲಿ ಈ ಬಗ್ಗೆ ದೇವೇಗೌಡರ ಜೊತೆ ಮಾತನಾಡುತ್ತೇನೆ. ದೇವೇಗೌಡರು ಹೇಳಿದಂತೆ ನಡೆಯುತ್ತೇನೆ’ ಎಂದು ಅವರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ