ಹೆಚ್.ಡಿ.ಕುಮಾರಸ್ವಾಮಿಗೆ ಹೃದಯ ಶಸ್ತ್ರಚಿಕಿತ್ಸೆ ಯಶಸ್ವಿ
ಬೆಂಗಳೂರು: ಬನ್ನೇರಘಟ್ಟ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ನಡೆದ ಹೃದಯ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ.
ಡಾ. ಸತ್ಯಕಿ ನೇತೃತ್ವದಲ್ಲಿ ಈ ಆಪರೇಷನ್ ನಡೆದಿದೆ. ಹೆಚ್.ಡಿ.ಕುಮಾರಸ್ವಾಮಿ ಪತ್ನಿ ಅನಿತಾ ಕುಮಾರಸ್ವಾಮಿ, ಪುತ್ರ ನಿಖಿಲ್ ಮತ್ತು ಹೆಚ್.ಡಿ.ಕೆ ಸೋದರಿ ಶೈಲಜಾ, ಜೆಡಿಎಸ್ ಮುಖಂಡ ಸಾ.ರಾ.ಮಹೇಶ್, ಮೈಸೂರು ಮೇಯರ್ ರವಿಕುಮಾರ್ ಆಪರೇಷನ್ ಥಿಯೇಟರ್ ಹೊರಗೆ ನಿಂತಿದ್ದಾರೆ.