ಭಾರೀ ಚಳಿ, ಜನರಿಗೆ ಅನಾರೋಗ್ಯ
ಚಂಡಮಾರುತ ಎಫೆಕ್ಟ್‌ನಿಂದ ತಾಪಮಾನ ಬದಲಾಗಿರುವುದು ರಾಜ್ಯದ ಜನರ ಆರೋಗ್ಯದ ಮೇಲೆ ಪ್ರಭಾವ ಬೀರಿದೆ ಎಂದು ವರದಿಯಾಗಿದೆ. ಶೀತ, ಕೆಮ್ಮು, ಜ್ವರದ ರೋಗ ಲಕ್ಷಣಗಳು ಹೆಚ್ಚಾಗಿವೆ ಎಂದು ತಜ್ಞರು ಹೇಳಿದ್ದಾರೆ. ಚಿಕಿತ್ಸೆಗಾಗಿ ಆಸ್ಪತ್ರೆಗೆ ಬರುವವರ ಸಂಖ್ಯೆಯಲ್ಲಿ ಹೆಚ್ಚಾಗಿದೆ ಎಂದು ಹೇಳಲಾಗಿದ್ದು, ಮಕ್ಕಳ ಆರೋಗ್ಯದ ಬಗ್ಗೆ ಜಾಗರೂಕರಾಗಿದ್ದು ಮುಂಜಾಗೃತಾ ಕ್ರಮ ತೆಗೆದುಕೊಳ್ಳುವುದು ಉತ್ತಮ. ಕೆಲದಿನಗಳಲ್ಲಿ ಇದು ಸಹಜ ಸ್ಥಿತಿಗೆ ಬರಲಿದ್ದು ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ.