ಬೆಳಗಾವಿ ಹಾಗೂ ಗೋಕಾಕ್ ಮಧ್ಯೆ ಸಂಪರ್ಕಿಸುವ ರಸ್ತೆಯಲ್ಲಿ ಗುಡ್ಡ ಕುಸಿತ ಉಂಟಾದ ಕಾರಣ ಬಾರೀ ಗಾತ್ರದ ಬಂಡೆಗಳು ರಸ್ತೆಗೆ ಉರುಳಿ ಬಿದ್ದ ಪರಿಣಾಮ ಆ ಮಾರ್ಗವಾಗಿ ಸಂಚರಿಸುವ ವಾಹನಗಳ ಸಂಚಾರಕ್ಕೆ ತಡೆಯುಂಟಾಗಿದೆ.
ಈಗಾಗಲೇ ಎನ್ ಡಿಆರ್ ಎಫ್ ಸಿಬ್ಬಂದಿ ತಂಡ ಸ್ಥಳಕ್ಕೆ ಆಗಮಿಸಿ ಕಾರ್ಯಚರಣೆ ನಡೆಸುತ್ತಿದೆ. ಅಲ್ಲದೇ ಇನ್ನಷ್ಟು ಮಳೆ ಸುರಿದರೆ ಮತ್ತಷ್ಟು ಗುಡ್ಡ ಕುಸಿತ ಉಂಟಾಗುವ ಸಾಧ್ಯತೆ ಇದೆ ಎನ್ನಲಾಗಿದೆ.