ಮಂಗಳೂರು: ರಾಜ್ಯದ ಕೆಲ ಭಾಗದಲ್ಲಿ ಕಳೆದ ಕೆಲ ದಿನಗಳಿಂದ ನಿರಂತರ ಮಳೆಯಾಗುತ್ತಿದೆ. ಇನ್ನೂ ಕರಾವಳಿ ಭಾಗದಲ್ಲಿ ಕಳೆದೊಂದು ವಾರದಿಂದ ನಿರಂತರ ಮಳೆಯಾಗುತ್ತಿದೆ.
ಇದೀಗ ಮುನ್ನೆಚ್ಚರಿಕಾ ಕ್ರಮವಾಗಿ ನಾಳೆ(29)ರಂದು ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲಾ ಮಕ್ಕಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ.
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ಆಗಸ್ಟ್ 29, 2025ರ ಶುಕ್ರವಾರದಂದು ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಗಾಳಿಯೊಂದಿಗೆ ತೀವ್ರ ಮಳೆಯಾಗುವ ಎಚ್ಚರಿಕೆಯನ್ನು ನೀಡಲಾಗಿದೆ.
ಇನ್ನೂ ಭೂಕುಸಿತ, ಪ್ರವಾಹ ಸಂಭವಿಸುವ ಸಾಧ್ಯತೆಯಿರುವುದರಿಂದ ಕೆಲ ಜಿಲ್ಲೆಯ ಜಿಲ್ಲಾಧಿಕಾರಿಗಳು ಮುನ್ನೆಚ್ಚರಿಕಾ ಕ್ರಮವಾಗಿ ಆಗಸ್ಟ್ 29ರಂದೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ.