ಇಂದು ಬೆಂಗಳೂರಿನಲ್ಲಿ ಭಾರೀ ಮಳೆ, ಕರ್ನಾಟಕದ ಹವಾಮಾನ ವರದಿ ಇಲ್ಲಿದೆ

Krishnaveni K

ಶುಕ್ರವಾರ, 10 ಮೇ 2024 (09:14 IST)
ಬೆಂಗಳೂರು: ಕಳೆದ ನಾಲ್ಕೈದು ದಿನಗಳಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆಯಾಗುತ್ತಲೇ ಇದೆ. ನಿನ್ನೆ ರಾತ್ರಿಯೂ ಹಲವೆಡೆ ವರುಣನ ಅಬ್ಬರ ಮುಂದುವರಿದಿದೆ. ಜೊತೆಗೆ ಇಂದು ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣವಿದೆ.

ಇಂದೂ ಕೂಡಾ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ 16 ವರೆಗೂ ಬೆಂಗಳೂರು ಸೇರಿದಂತೆ ಹಲವೆಡೆ ಮಳೆಯಾಗುವ ಸಾಧ‍್ಯತೆಯಿದೆ ಎಂದು ಹವಾಮಾನ ವರದಿ ಹೇಳಿದೆ. ಇದರಿಂದಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇಂದು ಬೆಂಗಳೂರಿನಲ್ಲಿ ಬೆಳಿಗ್ಗೆ ಗರಿಷ್ಠ ತಾಪಮಾನ 26 ಡಿಗ್ರಿಯಿದೆ. ಮಧ್ಯಾಹ್ನದ ನಂತರ ಭಾರೀ ಮಳೆಯಾಗುವ ಸೂಚನೆಯಿದೆ. ಇದು ನಾಳೆಯೂ ಮುಂದುವರಿಯುವ ಸೂಚನೆ ಕಂಡುಬರುತ್ತಿದೆ. ಸತತ ಮಳೆಯಿಂದಾಗಿ ಬೆಂಗಳೂರಿನ ವಾತಾವರಣ ಎಂದಿನಂತೆ ಕೂಲ್ ಆಗಿದೆ.

ಬೆಂಗಳೂರು ಮಾತ್ರವಲ್ಲದೆ, ಮೈಸೂರು, ಕೊಡಗು, ಹಾಸನ, ಕೋಲಾರ, ಚಾಮರಾಜನಗರ, ಬೀದರ್, ಕೊಪ್ಪಳ, ಯಾದಗಿರಿ, ಕಲಬುರಗಿ, ತುಮಕೂರಿನಲ್ಲೂ ಇಂದು ಭಾರೀ ಮಳೆಯಾಗುವ ಸೂಚನೆಯಿದೆ. ಕರ್ನಾಟಕದ ಇಂದಿನ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಶಿಯಸ್ ಇದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ